ಮೈಸೂರು: ಜಿಲ್ಲೆಯಲ್ಲಿ ನಿರ್ಮಾಣವಾಗಲಿರುವ ಮಹತ್ವಾಕಾಂಕ್ಷೆಯ ಚಿತ್ರನಗರಿಗೆ ಕರ್ನಾಟಕದ ಯುವರತ್ನ ಪುನೀತ್ ರಾಜ್‍ಕುಮಾರ್ ಅವರ ಹೆಸರಿಡಲು ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಘೋಷಿಸಿದರು.
Advertisement
ಇತ್ತೀಚೆಗೆ ನಮ್ಮನಗಲಿದ ಪುನೀತ್ ರಾಜ್‍ಕುಮಾರ್ ಅವರಿಗೆ ಮೈಸೂರಿನಲ್ಲಿ ದೊಡ್ಡ ವೇದಿಕೆಯಲ್ಲಿ “ನುಡಿನಮನ” ಸಲ್ಲಿಸುವ ಕಾರ್ಯಕ್ರಮ ಆಯೋಜಿಸಲು ನಡೆಸಿದ ಪೂರ್ವಭಾವಿ ಸಭೆಯ ನಂತರ ಸಚಿವರು ಈ ವಿಷಯ ಪ್ರಕಟಿಸಿದರು. ನುಡಿನಮನ ಕಾರ್ಯಕ್ರಮವನ್ನು ಆಯೋಜಿಸಲು ಉಪಸಮಿತಿಗಳನ್ನು ರಚಿಸಲಾಗುವುದು. ಈ ಸಮಿತಿಗಳು ಚರ್ಚಿಸಿ ನೀಡುವ ಸಲಹೆಯಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಲಾಗುವುದು ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸಹ ಆಹ್ವಾನಿಸಲಾಗುವುದು ಎಂದು ಸಚಿವರು ಹೇಳಿದರು. ಇದನ್ನೂ ಓದಿ: ಅಭಿಮಾನಿಗಳ ಪ್ರಶ್ನೆಗೆ ಖಡಕ್ ಉತ್ತರ ನೀಡಿದ ರಾಧಿಕಾ ಪಂಡಿತ್
Advertisement
ನಮ್ಮನಗಲಿದ ಕನ್ನಡದ ಖ್ಯಾತ ಯುವನಟ ಯುವರತ್ನ ಪುನಿತ್ ರಾಜ್‌ಕುಮಾರ್ ಅವರಿಗೆ ಮೈಸೂರಿನಲ್ಲಿ ದೊಡ್ಡ ವೇದಿಕೆಯಲ್ಲಿ "ನುಡಿನಮನ" ಸಲ್ಲಿಸುವ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಲಾಯಿತು.
ಮೈಸೂರಿನಲ್ಲಿ ನಿರ್ಮಾಣವಾಗಲಿರುವ ಚಿತ್ರನಗರಿಗೆ ಯುವರತ್ನ ದಿ|| ಪುನಿತ್ ರಾಜ್‌ಕುಮಾರ್ ಅವರ ಹೆಸರಿಡಲು ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು.@BSBommai pic.twitter.com/RSoAojki8v
— S T Somashekar Gowda (@STSomashekarMLA) November 10, 2021
Advertisement
ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿಯಲ್ಲಿರುವ ಬಯಲುರಂಗ ಮಂದಿರದಲ್ಲಿ ನುಡಿನಮನ ಕಾರ್ಯಕ್ರಮ ಆಯೋಜಿಸಲಾಗುವುದು. ಕಾರ್ಯಕ್ರಮಕ್ಕೆ ಶೀಘ್ರದಲ್ಲೇ ದಿನಾಂಕ ಪ್ರಕಟಿಸಲಾಗುವುದು. ಕಾರ್ಯಕ್ರಮದಲ್ಲಿ ಪುನೀತ್ ರಾಜ್‍ಕುಮಾರ್ ಕುರಿತು ಪುಸ್ತಕ ಬಿಡುಗಡೆ ಮಾಡಲಾಗುವುದು. ಈ ಪುಸ್ತಕಕ್ಕೆ ಸಾರ್ವಜನಿಕರಿಂದ ಲೇಖನ ಆಹ್ವಾನಿಸಲಾಗುವುದು. ಅಭಿಮಾನಿಗಳು ಲೇಖನ ಕಳುಹಿಸಿಕೊಡಬಹುದು ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಈಡೇರಿತು ಕನ್ನಡಿಗರ ಕಣ್ಮಣಿಯ ಮಹದಾಸೆ – 40 ಸಾವಿರ ಅಭಿಮಾನಿಗಳಿಗೆ ಒಟ್ಟಿಗೇ ಊಟ!
Advertisement
ಸಭೆಯಲ್ಲಿ ಶಾಸಕ ಎಲ್. ನಾಗೇಂದ್ರ, ನಿಮಮ ಮಂಡಳಿ ಪ್ರಾಧಿಕಾರದ ಅಧ್ಯಕ್ಷರುಗಳಾದ ಹೆಚ್.ವಿ.ರಾಜೀವ್, ಅಪ್ಪಣ್ಣ, ಕೌಟಿಲ್ಯ ರಘು, ಎ.ಹೇಮಂತ್ ಕುಮಾರ್ ಗೌಡ, ಎಲ್.ಆರ್.ಮಹದೇವಸ್ವಾಮಿ, ಫಣೀಶ್, ಕೃಷ್ಣಪ್ಪಗೌಡ, ಕಸಾಪ ಮಾಜಿ ಜಿಲ್ಲಾಧ್ಯಕ್ಷ ಡಾ. ವೈ.ಡಿ.ರಾಜಣ್ಣ, ರಾಜಶೇಖರ್ ಕದಂಬ, ಡಾ. ರಾಜ್‍ಕುಮಾರ್ ಶಿವರಾಜ್‍ಕುಮಾರ್ ಸಂಘದ ಅಧ್ಯಕ್ಷರಾದ ರವಿ, ಮಹದೇವ, ನಟ ಜಯಪ್ರಕಾಶ್, ಬಿ.ಎಂ.ರಾಮಚಂದ್ರ, ಬನ್ನೂರು ರಾಜು, ಭಾನು ಮೋಹನ್, ಮುಳ್ಳೂರು ನಂಜುಂಡಸ್ವಾಮಿ, ಮಡ್ಡಿಕೆರೆ ಗೋಪಾಲ್, ಮತ್ತಿತರರು ಉಪಸ್ಥಿತರಿದ್ದರು.