– ಕಿಡಿಗೇಡಿಗಳನ್ನ ಬಂಧಿಸುವಂತೆ ಆಗ್ರಹಿಸಿದ ಅಪ್ಪು ಅಭಿಮಾನಿಗಳು
ಶಿವಮೊಗ್ಗ: ನಾಮಫಲಕದಲ್ಲಿ ಪುನೀತ್ ರಾಜ್‍ಕುಮಾರ್ ಹೆಸರು ಅಳಿಸಿ ಕಿಡಿಗೇಡಿಗಳು ವಿಕೃತಿ ಮೆರೆದ ಘಟನೆ ಹೊಸನಗರ ತಾಲೂಕಿನಲ್ಲಿ ನಡೆದಿದೆ.
Advertisement
ಪುನೀತ್ ರಾಜ್‍ಕುಮಾರ್ ಅವರ ಸವಿನೆನಪಿಗಾಗಿ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ಸಾಗರ ರಸ್ತೆಯ ಕುಕ್ಕಳಲೆ ಗ್ರಾಮದ ರಸ್ತೆಗೆ ಗ್ರಾಮಸ್ಥರು, ಅಪ್ಪು ಅಭಿಮಾನಿಗಳು ಹಾಗೂ ಕನ್ನಡಪರ ಸಂಘಟನೆಯವರು ‘ಪುನೀತ್ ರಾಜ್‍ಕುಮಾರ್ ರಸ್ತೆ’ ಎಂದು ನಾಮಕರಣ ಮಾಡಿದ್ದರು.
Advertisement
ಗುರುವಾರ ರಾತ್ರಿ ಕಿಡಿಗೇಡಿಗಳು ಅಪ್ಪು ನಾಮಫಲಕಕ್ಕೆ ಬಿಳಿ ಬಣ್ಣವನ್ನು ಹಚ್ಚಿ ನಾಮಫಲಕದಲ್ಲಿ ಬರೆದಿರುವ ಪುನೀತ್ ರಾಜ್‍ಕುಮಾರ್ ರಸ್ತೆಯ ಹೆಸರನ್ನು ಅಳಿಸಿ ಅವಮಾನ ಎಸಗಿದ್ದಾರೆ. ಇದನ್ನೂ ಓದಿ: ಮಕ್ಕಳಿಗೆ ಐಸ್ ಕ್ರೀಂ ನೀಡದ್ದಕ್ಕೆ ಅಂಗಡಿ ಮೇಲೆ ದಾಳಿ ಮಾಡಿದ ತಂದೆ
Advertisement
Advertisement
ಪುನೀತ್ ರಾಜ್‍ಕುಮಾರ್ ಅವರ ನಾಮಫಲಕಕ್ಕೆ ಬಿಳಿ ಬಣ್ಣ ಹಚ್ಚುವ ಮೂಲಕ ಅವರ ಹೆಸರನ್ನು ಅಳಿಸಿ ಅವಮಾನ ಮಾಡಿರುವವರ ವಿರುದ್ಧ ಪೊಲೀಸರು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು, ಅಪ್ಪು ಅಭಿಮಾನಿಗಳು ಮತ್ತು ಕನ್ನಡಪರ ಸಂಘಟನೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.