ಬೆಂಗಳೂರು: ರಾಕ್‍ಲೈನ್ ವೆಂಕಟೇಶ್ ನಿರ್ಮಾಣದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ನಟಸಾರ್ವಭೌಮ ಸಿನಿಮಾ ಹೊಸ ದಾಖಲೆಗೆ ಮುಂದಾಗಿದೆ.
ನಟಸಾರ್ವಭೌಮ ಚಿತ್ರ 2 ಥಿಯೇಟರ್ ಗಳಲ್ಲಿ 24 ಗಂಟೆಗಳ ಪ್ರದರ್ಶನ ಕಾಣಲಿದೆ. ಬೆಂಗಳೂರಿನ ಊರ್ವಶಿ ಮತ್ತು ಗೌಡನಪಾಳ್ಯದ ಶ್ರೀನಿವಾಸ ಚಿತ್ರಮಂದಿರದಲ್ಲಿ ಒಂದೇ ದಿನದಲ್ಲಿ 8 ಬಾರಿ ನಟಸಾರ್ವಭೌಮ ಸಿನಿಮಾ ಪ್ರದರ್ಶನ ಕಾಣಲಿದೆ.
Advertisement
Advertisement
ಬುಧವಾರ ಮಧ್ಯರಾತ್ರಿ ರಾತ್ರಿ 12ಕ್ಕೆ ನಟಸಾರ್ವಭೌಮನ ಮೊದಲ ಆಟ ಆರಂಭವಾಗಿ ಗುರುವಾರ ಮಧ್ಯರಾತ್ರಿ 12ರವರೆಗೆ ನಿರಂತರ ಪ್ರದರ್ಶನ ಕಾಣಲಿದೆ. ಪ್ರಸನ್ನ ಚಿತ್ರಮಂದಿರದಲ್ಲಿ ಇಂದು ರಾತ್ರಿ 10 ಗಂಟೆಗೆ ಅಭಿಮಾನಿಗಳಿಗಾಗಿ ವಿಶೇಷ ಪ್ರದರ್ಶನ ಕೂಡ ಏರ್ಪಡಿಸಲಾಗಿದೆ. ಒಟ್ಟು 500ಕ್ಕೂ ಹೆಚ್ಚಿನ ಸ್ಕ್ರೀನ್‍ಗಳಲ್ಲಿ ನಟಸಾರ್ವಭೌಮ ರಿಲೀಸ್ ಆಗಲಿದೆ.
Advertisement
ರಾಕ್‍ಲೈನ್ ವೆಂಕಟೇಶ್ ನಿರ್ಮಾಣ ಮಾಡಿರುವ ಪವನ್ ಒಡೆಯರ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಪುನೀತ್ ರಾಜ್‍ಕುಮಾರ್ ಜೊತೆ ಡಿಂಪಲ್ ಬೆಡಗಿ ರಚಿತಾ ರಾಮ್, ಅನುಪಮಾ ಪರಮೇಶ್ವರ್, ಸಾಧುಕೋಕಿಲಾ, ಬಿ.ಸರೋಜಾ ದೇವಿ, ಚಿಕ್ಕಣ್ಣ, ರವಿಶಂಕರ್ ನಟಿಸಿದ್ದಾರೆ.
Advertisement
‘ರಣ ವಿಕ್ರಮ’ ಸಿನಿಮಾದ ಬಳಿಕ ಪುನೀತ್ ರಾಜ್‍ಕುಮಾರ್ ಹಾಗೂ ಪವನ್ ಒಡೆಯರ್ ಒಂದಾಗಿರುವುದು ಸಾಕಷ್ಟು ಕುತೂಹಲ ಮೂಡಿಸಿದ್ದು, ಗುರುವಾರ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಸಿನಿಮಾವನ್ನು ಆಸ್ಟ್ರೇಲಿಯಾ, ಅಮೆರಿಕ ಸೇರಿದಂತೆ ಹಲವು ಕಡೆ ರಿಲೀಸ್ ಆಗಲಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv