ಬೆಂಗಳೂರು: ನಟ ಪುನೀತ್ ರಾಜ್‍ಕುಮಾರ್ ಅವರ ಅಂತಿಮ ದರ್ಶನ ವೇಳೆ ಅಭಿಮಾನಿಗಳ ದಟ್ಟಣೆಯ ನೂಕು ನುಗ್ಗಲಿನಲ್ಲಿ ಸಿಲುಕಿ ಕಾಲು ಮುರಿತಕ್ಕೆ ಒಳಗಾದ ಕರ್ತವ್ಯ ನಿರ್ವಹಿಸುತ್ತಿದ್ದ ಮಡಿವಾಳ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಗಣೇಶ್ ನಾಯಕ್, ಆರೋಗ್ಯವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ವಿಚಾರಿಸಿದರು.
Advertisement
ಗಣೇಶ್ ನಾಯಕ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಸಚಿವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು. ಇಲಾಖೆಯಿಂದ ಚಿಕಿತ್ಸಾ ವೆಚ್ಚವನ್ನು ಭರಿಸುವ ಹಾಗೂ ಉನ್ನತ ಚಿಕಿತ್ಸೆ ಬೇಕಿದ್ದರೆ ಅದನ್ನೂ ಒದಗಿಸುವ ಬಗ್ಗೆ ಭರವಸೆ ನೀಡಿದ್ದು, ನೋವಿನಲ್ಲೂ ಕರ್ತವ್ಯ ಪ್ರಜ್ಞೆ ಮೆರೆದ ಗಣೇಶ್ ನಾಯಕ್ ಬಗ್ಗೆ ಸಚಿವರು ಸಂತೋಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪುನೀತ್ ಅಂತ್ಯಕ್ರಿಯೆಗೆ ಸಹಕರಿಸಿದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ಸಿಎಂ ಧನ್ಯವಾದ
Advertisement
Advertisement
ಗಣೇಶ್ ನಾಯಕ್ ಮಲ್ಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು, ಪ್ರಸ್ತುತ ವೆಂಕಟೇಶ್ವರ ಆಸ್ಪತ್ರೆ ಹೊಸೂರ್ ರಸ್ತೆ ಬೆಂಗಳೂರಿನಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಇಬ್ಬರ ಬಾಳಿಗೆ ಬೆಳಕಾದ ಅಪ್ಪು
Advertisement