Bengaluru CityDistrictsKarnatakaLatestLeading NewsMain PostTech

ಸರ್ಕಾರಿ ಶಾಲಾ ವಿದ್ಯಾರ್ಥಿಗಳೇ ನಿರ್ಮಿಸಿರೋ ಪುನೀತ್ ಉಪಗ್ರಹ ಶೀಘ್ರದಲ್ಲೇ ಉಡಾವಣೆ

ಬೆಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳೇ ನಿರ್ಮಿಸುತ್ತಿರುವ ಪುನೀತ್ ಉಪಗ್ರಹವನ್ನು ನ.15 ರಿಂದ ಡಿ.31ರ ನಡುವೆ ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಮಕ್ಕಳಲ್ಲಿ ವೈಜ್ಞಾನಿಕ ಕುತೂಹಲ ಮತ್ತು ಆಸಕ್ತಿ ಬೆಳೆಸಲು ಪ್ರೌಢಶಾಲಾ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಜಿಲ್ಲೆ, ವಿಭಾಗೀಯ ಮತ್ತು ರಾಜ್ಯ ಮಟ್ಟದ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ.

ಇದರಲ್ಲಿ ಅಂತಿಮವಾಗಿ 1 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಉಪಗ್ರಹ ಉಡಾವಣೆ ಕಾರ್ಯಕ್ರಮಕ್ಕೆ ಶ್ರೀಹರಿಕೋಟಾಗೆ ಕರೆದುಕೊಂಡು ಹೋಗಲಾಗುವುದು. 75ನೇ ವರ್ಷಾಚರಣೆಯ ಅಂಗವಾಗಿ ಪ್ರಧಾನಿ ಮೋದಿ ವಿದ್ಯಾರ್ಥಿಗಳಿಂದಲೇ 75 ಉಪಗ್ರಹಗಳನ್ನು ಅಭಿವೃದ್ಧಿಪಡಿಸುವ ಯೋಜನೆಯನ್ನು ಘೋಷಿಸಿದ್ದರು.

ಈ ಪೈಕಿ ಬೆಂಗಳೂರು ವಲಯದ ಸರಕಾರಿ ಶಾಲೆಗಳ ವಿದ್ಯಾರ್ಥಿಗಳು `ಕೆಜಿಎಸ್3ಸ್ಯಾಟ್’ ಉಪಗ್ರಹವನ್ನು 1.90 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸುತ್ತಿದ್ದು, ಮಲ್ಲೇಶ್ವರಂನಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ದಿವಂಗತ ನಟ ಪುನೀತ್ ಸ್ಮರಣಾರ್ಥ ಉಪಗ್ರಹಕ್ಕೆ ಅವರ ಹೆಸರಿಡಲಾಗಿದೆ. ಪ್ರಧಾನಿ ಕಾರ್ಯಕ್ರಮದಡಿ ಉಡಾವಣೆಗೊಳ್ಳುತ್ತಿರುವ ದೇಶದ ಪ್ರಥಮ ಉಪಗ್ರಹ ಇದಾಗಿದೆ.

Live Tv

Leave a Reply

Your email address will not be published.

Back to top button