ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Puneeth Rajkumar) ಹುಟ್ಟುಹಬ್ಬವನ್ನು (Birthday) ಅಭಿಮಾನಿಗಳು ರಾಜ್ಯಾದ್ಯಂತ ಆಚರಿಸುತ್ತಿದ್ದಾರೆ. ಅಪ್ಪು (Appu) ಪುಣ್ಯಭೂಮಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 6ರ ತನಕ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರೆ, ರಾಜ್ಯದ ನಾನಾ ಕಡೆಗಳಲ್ಲಿ ಅಭಿಮಾನಿಗಳು ಹಲವು ರೀತಿಯಲ್ಲಿ ನೆಚ್ಚಿನ ನಟನ ಹುಟ್ಟು ಹಬ್ಬವನ್ನು ಆಚರಿಸುತ್ತಾರೆ. ಅಪ್ಪು ನಮ್ಮೊಂದಿಗೆ ದೈಹಿಕವಾಗಿ ಇಲ್ಲವೆಂದರೆ ಸಂಭ್ರಮಕ್ಕೇನೂ ಕೊರತೆ ಕಾಣುತ್ತಿಲ್ಲ.
Advertisement
ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿಗೆ ಬೆಳಗ್ಗೆ ಎಂಟು ಗಂಟೆಗೆ ಪೂಜೆ ಸಲ್ಲಿಸುವ ಮೂಲಕ ಹುಟ್ಟು ಹಬ್ಬಕ್ಕೆ ಚಾಲನೆ ನೀಡಲಾಗುತ್ತಿದೆ. ಬೆಳಗ್ಗೆ 10 ರಿಂದ ಅನ್ನ ಸಂತರ್ಪಣೆ ಹಾಗೂ ಸಂಜೆ 6 ಗಂಟೆಗೆ ಅಪ್ಪು ಹಿಟ್ ಹಾಡುಗಳ ಸಂಗೀತ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಡಾ.ರಾಜ್ ಕುಟುಂಬದ ಅನೇಕ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ:ಜಿನಿವಾದಲ್ಲಿ ಇಂದು ‘ಕಾಂತಾರ’ ಸಿನಿಮಾ ಪ್ರದರ್ಶನ : ರಿಷಬ್ ಶೆಟ್ಟಿ ಭಾಗಿ
Advertisement
Advertisement
ರಾಜ್ಯದ ನಾನಾ ಕಡೆಗಳಲ್ಲಿ ಅಪ್ಪು ಪುತ್ಥಳಿ ಅನಾವರಣ, ಅನ್ನ ಸಂತರ್ಪಣೆ, ಅನಾಥಾಶ್ರಮದಲ್ಲಿ ಹುಟ್ಟು ಹಬ್ಬ ಸೇರಿದಂತೆ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಧಾರವಾಡದಲ್ಲಿ ಅಪ್ಪು ಹೆಸರಿನಲ್ಲೇ ಚಂದ್ರಶೇಖರ್ ಮಾಡಲಗೇರಿ ಮತ್ತು ತಂಡ ಚಿತ್ರೋತ್ಸವವನ್ನು (Film Festival) ಆಯೋಜನೆ ಮಾಡಲಾಗಿದೆ. ಮೂರು ದಿನಗಳ ಕಾಲ ಅಪ್ಪು ಹೆಸರಿನಲ್ಲೇ ಈ ಚಿತ್ರೋತ್ಸವ ನಡೆಯಲಿದೆ. ಅಪ್ಪು ಹೆಸರಿನಲ್ಲಿ ಪ್ರಶಸ್ತಿಗಳನ್ನೂ ನೀಡಲಾಗುತ್ತಿದೆ.
Advertisement
ಬೆಂಗಳೂರಿನ ಅನೇಕ ಕಡೆ ಇಂದು ಅಪ್ಪು ಹೆಸರಿನಲ್ಲಿ ಸಾಕಷ್ಟು ಕಾರ್ಯಕ್ರಮಗಳು ನಡೆಯಲಿವೆ. ಅಲ್ಲದೇ, ಪುನೀತ್ ಅವರ ಹುಟ್ಟು ಹಬ್ಬದ ದಿನದಂದೆ ಆರ್.ಚಂದ್ರು ನಿರ್ದೇಶನದ ಉಪೇಂದ್ರ, ಸುದೀಪ್ ಮತ್ತು ಶಿವರಾಜ್ ಕುಮಾರ್ ಕಾಂಬಿನೇಷನ್ ನ ಕಬ್ಜ ಚಿತ್ರ ರಿಲೀಸ್ ಆಗಿದೆ. ಬಿಡುಗಡೆಯಾದ ಅಷ್ಟೂ ಚಿತ್ರಮಂದಿರಗಳಲ್ಲೂ ಅಪ್ಪು ಕಟೌಟ್ ಹಾಕಿದೆ ಚಿತ್ರತಂಡ.