ಚಂಡೀಗಢ: ಪಂಜಾಬ್‌ನ (Punjab) ಲುಧಿಯಾನ (Ludhiana) ಕ್ಷೇತ್ರದ ಆಪ್ ಶಾಸಕ ಗುರುಪ್ರೀತ್ ಗೋಗಿ (Gurpreet Gogi) ಆಕಸ್ಮಿಕವಾಗಿ ಗುಂಡು ತಗುಲಿ ಶುಕ್ರವಾರ ತಡರಾತ್ರಿ ಸಾವನ್ನಪ್ಪಿದ್ದಾರೆ.
ಗುರುಪ್ರೀತ್ ಗೋಗಿ (58) ಅವರ ತಲೆಗೆ ಗುಂಡು ತಗುಲಿದ ನಂತರ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಷ್ಟು ಹೊತ್ತಿಗಾಗಲೇ ಶಾಸಕರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಜಸ್ಕರ್ ಸಿಂಗ್ ತೇಜ ತಿಳಿಸಿದ್ದಾರೆ. ಇದನ್ನೂ ಓದಿ: ಕೆನಡಾ ಪ್ರಧಾನಿ ಸ್ಥಾನಕ್ಕೆ ಟ್ರುಡೊ ರಾಜೀನಾಮೆ – ಭಾರತದ ಇಂಪ್ಯಾಕ್ಟ್ ಏನು?
Advertisement
Advertisement
ಗೋಗಿ ಅವರ ಮೃತದೇಹವನ್ನು ಡಿಎಂಸಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ತಲೆಗೆ ಆಕಸ್ಮಿಕವಾಗಿ ಗುಂಡು ತಗುಲಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಹೇಳಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಅಸಲಿ ಸತ್ಯ ಗೊತ್ತಾಗಲಿದೆ ಎಂದು ತೇಜ ಹೇಳಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯ ಶ್ರೀರಾಮನ ಮೂರ್ತಿಗೆ `ರಾಮಲಲ್ಲಾʼ ಅಂತ ಕರೆಯುವುದೇಕೆ?
Advertisement