ಚಂಡೀಗಢ: ಪಂಜಾಬ್ ಕಾಂಗ್ರೆಸ್‍ನಲ್ಲಿ ಬಿಕ್ಕಟ್ಟು ತಾರಕಕ್ಕೆ ಏರಿದೆ. ಮೊದಲು ಅಮರಿಂದರ್ Vs ನವಜೋತ್ ಸಿಂಗ್ ಸಿಧು ಇದ್ದ ಸಮರ, ಈಗ ಸಿಧು Vs ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಛನ್ನಿ ಎಂಬಂತಾಗಿದೆ.
Advertisement
ಇವರಿಬ್ಬರ ನಡುವಿನ ಪ್ರತಿಷ್ಠೆಯ ಸಮರದಲ್ಲಿ ಕಾಂಗ್ರೆಸ್ ಬಡವಾಗುತ್ತಿದ್ದು, ಚರಣ್‍ಜಿತ್ ಸಿಂಗ್ ಛನ್ನಿ ನೇತೃತ್ವದ ಸರ್ಕಾರಕ್ಕೆ ನವಜೋತ್ ಸಿಂಗ್ ಸಿಧು ಕೆಲಸ ಮಾಡಲು ಬಿಡುತ್ತಿಲ್ಲ ಪದೇ ಪದೇ ಅಡ್ಡಿಯುಂಟು ಮಾಡುತ್ತಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಅಡ್ವೋಕೇಟ್ ಜನರಲ್ ಎಪಿಎಸ್ ಡಿಯೋಲ್ ಆರೋಪಿಸಿದ್ದಾರೆ. ಇದನ್ನೂ ಓದಿ: ನನ್ನನ್ನು ತೆಗೆದು ಸಿಎಂ ಆಗಲು ಸಿಧು ಪ್ರಯತ್ನ: ಅಮರೀಂದರ್ ಸಿಂಗ್
Advertisement
Advertisement
ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಸಿಧು ಹೀಗೆಲ್ಲಾ ಮಾಡುತ್ತಿದ್ದಾರೆ ಎಂದು ಅಡ್ವೋಕೇಟ್ ಜನರಲ್ ಕಿಡಿಕಾರಿದ್ದಾರೆ. ಅಲ್ಲದೇ, ಕಾಂಗ್ರೆಸ್ ಪಕ್ಷವನ್ನು ಚುನಾವಣೆ ಹೊತ್ತಿಗೆ ಬಲಹೀನ ಮಾಡಲು ಕೆಲ ರಾಜಕೀಯ ಶಕ್ತಿಗಳು ಪ್ರಯತ್ನಿಸುತ್ತಿವೆ ಎಂದು ಡಿಯೋಲ್ ಆರೋಪ ಮಾಡಿದ್ದಾರೆ. ಈ ನಡುವೆ ನಾನು ಬಡವ ಆಗಿರಬಹುದು. ಬಡ ಕುಟುಂಬದಲ್ಲಿ ಜನಿಸಿದವನು ಆಗಿರಬಹುದು. ಆದರೆ ಬಲಹೀನನಲ್ಲ. ಆದಷ್ಟು ಬೇಗನೇ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆ ಎಂದು ಛನ್ನಿ ಹೇಳಿಕೆ ನೀಡುವ ಮೂಲಕ ಸಿಧುಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ನಾನು ಹಿಂದೂ ದೇವಸ್ಥಾನಕ್ಕೆ ಭೇಟಿ ನೀಡುತ್ತೇನೆ: ಅರವಿಂದ್ ಕೇಜ್ರಿವಾಲ್
Advertisement