LatestLeading NewsMain PostNational

26,454 ಹುದ್ದೆಗಳ ನೇಮಕಾತಿಗೆ ಪಂಜಾಬ್ ಸರ್ಕಾರ ಅನುಮೋದನೆ

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿಂದು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 26,454 ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಲಾಯಿತು.

ಈಚೆಗೆ ನಡೆದ ವಿಧಾನಸಭೆ ಚುನಾವಣೆಲ್ಲಿ ಪಂಜಾಬ್ ಗೆಲುವು ಸಾಧಿಸಿದ ಎಎಪಿ ಪಕ್ಷವು ಖಾಲಿ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡುವುದಾಗಿ ಭರವಸೆ ನೀಡಿತ್ತು. ಅದರಂತೆ ಇಂದು ವಿವಿಧ ಇಲಾಖೆಗಳಲ್ಲಿ, ವಿವಿಧ ಹಂತಗಳಲ್ಲಿರುವ 26,454 ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಿದ್ದು, ಹುದ್ದೆಗಳ ಮಾನದಂಡ ಮತ್ತು ವಿವರಗಳನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ಹೇಳಿದೆ. ಇದನ್ನೂ ಓದಿ: ನಾನು ಬಾಬರಿ ಮಸೀದಿ ಧ್ವಂಸದಲ್ಲಿ ಭಾಗಿಯಾಗಿದ್ದೆ, ಶಿವಸೇನೆ ನಾಯಕರು ಯಾರೂ ಇರಲಿಲ್ಲ : ಫಡ್ನವೀಸ್

BhagwantMann

ಅಲ್ಲದೆ, ಸಿಎಂ ಭಗವಂತ್ ಮಾನ್ ಈ ಹಿಂದೆಯೇ ಘೋಷಿಸಿದಂತೆ ಒಬ್ಬ ಶಾಸಕ ಒಂದು ಪಿಂಚಣಿ ಯೋಜನೆಗೂ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಮಾಜಿ ಶಾಸಕರಿಗೆ ಪಿಂಚಣಿ ನೀಡಲು ರಾಜ್ಯ ಸರ್ಕಾರ ಹೊಸ ನೀತಿಯನ್ನು ತರಲಿದೆ ಎಂದು ಸಭೆ ಹೇಳಿದೆ.

ಮನೆ ಬಾಗಿಲಿಗೇ ಪಡಿತರ: ಇದೇ ವೇಳೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿಯಲ್ಲಿ ರಾಜ್ಯದ 40 ಲಕ್ಷ ಮನೆಗಳ 1.5 ಕೋಟಿ ಫಲಾನುಭವಿಗಳಿಗೆ ತಿಂಗಳಿಗೆ 5 ಕೆಜಿ ಗೋಧಿ ಅಥವಾ ಗೋಧಿ ಹಿಟ್ಟನ್ನು ಮನೆ ಬಾಗಿಲಿಗೆ ತಲುಪಿಸಲು ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿತು. ಇದನ್ನೂ ಓದಿ: ಬಾಬರಿ ಮಸೀದಿ ಕೆಡವಿದಾಗ ನೀವು ಓಡಿಹೋಗಿದ್ದಿರಿ: ಬಿಜೆಪಿಗೆ ಉದ್ಧವ್‌ ಠಾಕ್ರೆ ತರಾಟೆ

Bhagwant Mann

ಒಬ್ಬ ಶಾಸಕ-ಒಂದು ಪಿಂಚಣಿ: ಭಗವಂತ್ ಮಾನ್ ಅಧಿಕಾರ ವಹಿಸಿಕೊಂಡ ಕೆಲ ದಿನಗಳಲ್ಲೇ, ಪಂಜಾಬ್ ಮಾಜಿ ಶಾಸಕರು 2 ಬಾರಿ, 5 ಬಾರಿ ಅಥವಾ ಹತ್ತು ಬಾರಿ ಗೆದ್ದಿದ್ದರೂ ಅವರು ಇನ್ನು ಮುಂದೆ ಒಂದು ಅವಧಿಗೆ ಮಾತ್ರ ಪಿಂಚಣಿ ಪಡೆಯಲು ಅರ್ಹರಾಗಿರುತ್ತಾರೆ. ಅವರು ಸಲ್ಲಿಸಿದ್ದ ಸೇವೆಗೆ ಪ್ರತಿ ಅವಧಿಗೂ ಪಿಂಚಣಿ ಪಡೆಯುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗುವುದು. ಇದರಿಂದ ಉಳಿತಾಯವಾಗುವ ಹಣವನ್ನು ಜನರ ಕಲ್ಯಾಣಕ್ಕೆ ವಿನಿಯೋಗಿಸಲಾಗುವುದು ಎಂದು ಹೇಳಿದ್ದರು. ಇದನ್ನೂ ಓದಿ: ಎರಡೂವರೆ ಗಂಟೆ ಸಭೆ – ರಾಜ್ಯದಲ್ಲೂ ಯುವ ಮುಖಗಳಿಗೆ ಮಣೆ?

Bhagwant Mann

ಚುನಾವಣೆಯಲ್ಲಿ ಸೋತರೂ ಕೆಲವರು 3.50 ರಿಂದ 5 ಲಕ್ಷ ರೂ. ವರೆಗೂ ಪಿಂಚಣಿ ಪಡೆಯುತ್ತಿದ್ದಾರೆ. ಲಾಲ್‌ಸಿಂಗ್, ಸರ್ವಾನ್‌ಸಿಂಗ್ ಫಿಲೌ ಹಾಗೂ ರಾಜಿಂದರ್ ಕೌರ್ ಭಟ್ಟಾಲ್ ತಿಂಗಳಿಗೆ 3.55 ಲಕ್ಷ ಪಿಂಚಣಿ ಪಡೆಯುತ್ತಿದ್ದಾರೆ. ರವಿಂದರ್ ಸಿಂಗ್, ಬೈಲ್ವಿಂದರ್ ಸಿಂಗ್ 2.75 ಲಕ್ಷ ಹಾಗೂ ಅಕಾಲಿ ದಳದ ಮುಖ್ಯಸ್ಥ ಪ್ರಕಾಶ್ ಸಿಂಗ್ ಬಾದಲ್ 5 ಲಕ್ಷ ಪಿಂಚಣಿ ಪಡೆಯುತ್ತಿದ್ದಾರೆ. ಇದರಿಂದ ಬೊಕ್ಕಸಕ್ಕೆ ಕೋಟ್ಯಂತರ ರೂ. ಆರ್ಥಿಕ ಹೊರೆಯಾಗುತ್ತಿದೆ ಎಂಬುದನ್ನು ಉಲ್ಲೇಖಿಸಿದ್ದರು.

Leave a Reply

Your email address will not be published.

Back to top button