ಮಾರ್ಚ್ 16ಕ್ಕೆ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕಾರ

Public TV
1 Min Read
Bhagwant Mann

ಚಂಡೀಗಢ: ಪಂಜಾಬ್ ಚುನಾವಣೆಯಲ್ಲಿ ಭಾರೀ ಗೆಲುವಿನ ನಂತರ ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ರಾಜ್ಯದ ನಿಯೋಜಿತ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಮಾರ್ಚ್ 16ರಂದು ಖಟ್ಕರ್ ಕಲಾನ್‍ನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದೇನೆ ಎಂದು ಹೇಳಿದ್ದಾರೆ.

ಇಂದು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರನ್ನು ಭೇಟಿ ಮಾಡಿದ ಅವರು, ರಾಜ್ಯದಲ್ಲಿ ಹೊಸ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು. ಮಾರ್ಚ್ 16ರಂದು ಮಧ್ಯಾಹ್ನ 12:30ಕ್ಕೆ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಹುಟ್ಟೂರಿನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ತಿಳಿಸಿದ್ದಾರೆ.

dolon

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪಂಜಾಬ್‍ನಾದ್ಯಂತದ ಜನರು ಸಮಾರಂಭಕ್ಕೆ ಬರುತ್ತಾರೆ. ಈ ಮೂಲಕವಾಗಿ ಭಗತ್ ಸಿಂಗ್‍ಗೆ ಜನರು ಗೌರವವನ್ನು ಸಲ್ಲಿಸುತ್ತಾರೆ ಎಂದ ಅವರು, ನಮ್ಮಲ್ಲಿ ಉತ್ತಮ ಕ್ಯಾಬಿನೆಟ್ ಇರುತ್ತದೆ. ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು. ಆದ್ದರಿಂದ ನೀವು ಕಾಯಬೇಕಾಗಿದೆ ಎಂದು ಭರವಸೆ ನೀಡಿದರು.

bhagwant mann 4

ಶುಕ್ರವಾರ ಮೊಹಾಲಿಯಲ್ಲಿ ನಡೆದ ಪಕ್ಷದ ಶಾಸಕರ ಸಭೆಯಲ್ಲಿ ಧುರಿ ಕ್ಷೇತ್ರದಿಂದ 58,000 ಮತಗಳಿಂದ ಗೆದ್ದಿರುವ ಭಗವಂತ ಮಾನ್ ಅವರನ್ನು ಎಎಪಿಯ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಇದನ್ನೂ ಓದಿ: ರಷ್ಯಾ-ಉಕ್ರೇನ್ ಯುದ್ಧ – ಇನ್‍ಸ್ಟಾಗ್ರಾಮ್ ನಿರ್ಬಂಧಿಸಲು ಮುಂದಾದ ರಷ್ಯಾ

bhagwant mann 3

ಭಗವಂತ್ ಮಾನ್ ಅವರು ತಮ್ಮ ಪ್ರಮಾಣ ವಚನ ಸಮಾರಂಭಕ್ಕೆ ಆಪ್ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಆಹ್ವಾನಿಸಿದ್ದಾರೆ. 117 ಸದಸ್ಯ ಬಲದ ಪಂಜಾಬ್ ವಿಧಾನಸಭೆಯಲ್ಲಿ ಆಪ್ ಪಕ್ಷ 92 ಸ್ಥಾನಗಳನ್ನು ಗೆಲುವು ಸಾಧಿಸಿದೆ. ಇದನ್ನೂ ಓದಿ: ಡೇ – ನೈಟ್ ಪಿಂಕ್ ಬಾಲ್ ಟೆಸ್ಟ್‌ಗೆ ಬೆಂಗಳೂರು ಸಜ್ಜು – 2 ವರ್ಷಗಳ ಬಳಿಕ ಚಿನ್ನಸ್ವಾಮಿಯಲ್ಲಿ ಟೀಂ ಇಂಡಿಯಾ ಕಾದಾಟ

Share This Article
Leave a Comment

Leave a Reply

Your email address will not be published. Required fields are marked *