ಚಂಡೀಗಢ: ಪಂಜಾಬ್‌ನ (Punjab Blasts) ಜಲಂಧರ್‌ನಲ್ಲಿರುವ ಬಿಜೆಪಿ ನಾಯಕನ ಮನೆ ಮೇಲೆ ನಡೆದ ಗ್ರೆನೇಡ್ ದಾಳಿ ಸಂಚುಕೋರನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಲಿಂಕ್ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗ್ರೆನೇಡ್ ದಾಳಿಯ ಸಂಚುಕೋರ ಜೀಶನ್ ಅಖ್ತರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಆಪ್ತ ಸಹಚರ ಮತ್ತು ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಬೇಕಾಗಿರುವ ಆರೋಪಿ ಎಂದು ಪಂಜಾಬ್ ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ದೆಹಲಿಯಲ್ಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ ಕ್ರಮ – ಸಿಎನ್‌ಜಿ ಆಟೋಗಳಿಗೆ ಬ್ರೇಕ್, ಇವಿಗೆ ಮಾತ್ರ ಆದ್ಯತೆ?
ಪಾಕಿಸ್ತಾನದ ಐಎಸ್‌ಐ ಪಂಜಾಬ್‌ನಲ್ಲಿ ಧಾರ್ಮಿಕ ಸಾಮರಸ್ಯವನ್ನು ಕದಡಲು ಸಂಚು ರೂಪಿಸಿದೆ. ಬಿಜೆಪಿ ನಾಯಕನ ವಿರುದ್ಧದ ದಾಳಿಯನ್ನು ಗಡಿಯಾಚೆಯಿಂದ ಯೋಜಿಸಲಾಗಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
ಮಾಜಿ ಸಚಿವ ಮತ್ತು ಮಾಜಿ ರಾಜ್ಯ ಬಿಜೆಪಿ ಮುಖ್ಯಸ್ಥರೂ ಆಗಿದ್ದ ಕಾಲಿಯಾ ಅವರ ಮನೆಯಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಸ್ಫೋಟದಲ್ಲಿ ಗೋಡೆಗೆ ಹಾನಿಯಾಗಿತ್ತು. ಅವರ ಮನೆ ಮತ್ತು ವಾಹನಗಳ ಗಾಜಿನ ಕಿಟಕಿಗಳು ಪುಡಿಪುಡಿಯಾಗಿದ್ದವು. ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದರು. ಆ ಸಮಯದಲ್ಲಿ ಬಿಜೆಪಿ ಮುಖಂಡರೂ ಮನೆಯಲ್ಲಿದ್ದರು. ಇದನ್ನೂ ಓದಿ: ರಾಜ್ಯಪಾಲರ ನಡೆ ಅಸಾಂವಿಧಾನಿಕ, ಕಾನೂನಿನ ಉಲ್ಲಂಘನೆ – ತಮಿಳುನಾಡು ಗವರ್ನರ್ ವಿರುದ್ಧ ಸುಪ್ರೀಂ ಆದೇಶ
ಗ್ರೆನೇಡ್ ಎಸೆದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದ್ದು, ದಾಳಿಗೆ ಬಳಸಲಾದ ಇ-ರಿಕ್ಷಾವನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.