ಚಂಡೀಗಢ: ಚಂಡೀಗಢದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ವಾತಂತ್ರ್ಯ ಹೋರಾಟಗಾರ ಶಹೀದ್ ಭಗತ್ ಸಿಂಗ್ ಅವರ ಹೆಸರಿನಿಂದ ಮರುನಾಮಕಾರಣ ಮಾಡಲು ಪಂಜಾಬ್ ಹಾಗೂ ಹರಿಯಾಣ ಸರ್ಕಾರಗಳು ನಿರ್ಧರಿಸಿದೆ.
ಈ ಬಗ್ಗೆ ಉಭಯ ಸರ್ಕಾರಗಳ ಸಭೆ ನಡೆದಿದ್ದು, ಹರಿಯಾಣದ ಉಪಮುಖ್ಯಮಂತ್ರಿ ದುಷ್ಯಂತ್ ಚೌತಾಲಾ ಉಪಸ್ಥಿತರಿದ್ದರು.
Advertisement
चंडीगढ़ के अंतरराष्ट्रीय हवाई अड्डे का नाम शहीद भगत सिंह जी के नाम पर रखा जाएगा इस पर पंजाब और हरियाणा के बीच सहमति बनी…
आज हरियाणा के उपमुख्यमंत्री दुष्यंत चौटाला के साथ इस मसले पर मीटिंग की pic.twitter.com/ahkSP6PTBr
— Bhagwant Mann (@BhagwantMann) August 20, 2022
Advertisement
ಈ ಬಗ್ಗೆ ಪಂಜಾಬ್‍ನ ಮುಖ್ಯಮಂತ್ರಿ ಭಗವಂತ್ ಮಾನ್ ಟ್ವೀಟ್ ಮಾಡಿ, ಚಂಡೀಗಢ ವಿಮಾನ ನಿಲ್ದಾಣಕ್ಕೆ ಭಗತ್ ಸಿಂಗ್ ಹೆಸರನ್ನು ಇಡಲು ಪಂಜಾಬ್ ಹಾಗೂ ಹರಿಯಾಣ ಸರ್ಕಾರಗಳೆರಡು ಒಪ್ಪಿಕೊಂಡಿವೆ. ಈ ವಿಷಯದ ಕುರಿತು ಇಂದು ಹರಿಯಾಣ ಉಪಮುಖ್ಯಮಂತ್ರಿ ದುಶ್ಯಂತ್ ಚೌತಾಲಾ ಅವರನ್ನು ಭೇಟಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಸಾವರ್ಕರ್ ಪಾರ್ಕ್ ನಿರ್ಮಾಣ – ಸ್ವಾತಂತ್ರ್ಯ ಸೇನಾನಿ ಎಂದು ಒಪ್ಪಿದ್ದ ಕಾಂಗ್ರೆಸ್ಸಿಗರು
Advertisement
Advertisement
ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಹೆಸರಿಡಲು ಸಲಹೆ ನೀಡಿರುವುದು ಇದೇ ಮೊದಲಲ್ಲ. 2016ರಲ್ಲಿ ಹರಿಯಾಣ ವಿಧಾನಸಭೆಯು ಚಂಡೀಗಢ ವಿಮಾನ ನಿಲ್ದಾಣಕ್ಕೆ ಭಗತ್ ಸಿಂಗ್ ಹೆಸರಿಡಲು ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿತ್ತು. ಇದನ್ನೂ ಓದಿ: ಸಿದ್ದರಾಮಯ್ಯಗೆ ಡಿಕೆಶಿಯವರೇ ಮೊಟ್ಟೆ ಹೊಡೆಸಿರಬೇಕು: ಕಟೀಲ್