ಚಂಡೀಗಢ: ಪಂಜಾಬ್ ನೂತನ ಮುಖ್ಯಮಂತ್ರಿ ಭಗವಂತ್ ಮಾನ್ ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಪಂಜಾಬ್ ಸ್ಥಿತಿಗತಿ ಹಾಗೂ ಮುಂದೆ ಕೈಗೊಳ್ಳಬಹುದಾದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿದರು.
ಇದೇ ವೇಳೆ ಪಂಜಾಬ್ ಆರ್ಥಿಕ ಸ್ಥಿತಿಗತಿಯನ್ನು ಸುಧಾರಿಸಲು ಪ್ರತಿ ವರ್ಷ 50 ಸಾವಿರ ಕೋಟಿ ಪ್ಯಾಕೇಜ್ ನೀಡುವಂತೆ ಮನವಿ ಮಾಡಿದರು. ಹಣ ಬಿಡುಗಡೆ ಮಾಡಿದರೆ, ಮುಂದಿನ 2 ವರ್ಷದಲ್ಲಿ ಆರ್ಥಿಕತೆ ಸ್ವಲ್ಪ ಚೇತರಿಕೆ ಕಾಣಲಿದೆ ಎಂದು ಮಾನ್ ಪ್ರಸ್ತಾಪಿಸಿದರು. ಇದನ್ನೂ ಓದಿ: ಟ್ರಾನ್ಸ್‌ಫಾರ್ಮರ್ ಸ್ಫೋಟ- ಮೃತರ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ಘೋಷಿಸಿದ ಸುನೀಲ್ ಕುಮಾರ್
ಇದಕ್ಕೆ ಸಕಾರಾತ್ಮಕವಾಗಿ ಸ್ಪಂಧಿಸಿದ ಪ್ರಧಾನಿ ನರೇಂದ್ರ ಮೋದಿ, ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಕ್ಕೆ ಅಭಿನಂದನೆಗಳು. ಪಂಜಾಬ್ ಮತ್ತು ಅಲ್ಲಿನ ಜನರ ಅಭಿವೃದ್ಧಿಗಾಗಿ ಜೊತೆಯಾಗಿ ಕೆಲಸ ಮಾಡೋಣ ಎಂದು ಶುಭಕೋರಿದರು. ಇದನ್ನೂ ಓದಿ: ಹಿಜಬ್ ಬದಲು ದುಪಟ್ಟಾ ಹಾಕಲು ಅವಕಾಶ ಕೊಡಿ ಎಂದು ಶಲ್ಯ ಹಿಂದೆ, ಮುಂದೆ ಮಾಡಿ ತೋರಿಸಿದ ಸಿದ್ದು