ಚಂಡೀಗಢ: ಕೊರೊನಾ ಮೊದಲ ಮತ್ತು ಎರಡನೇ ಅಲೆಯನ್ನು ತಡೆಯುವಲ್ಲಿ ಅರವಿಂದ್ ಕೇಜ್ರಿವಾಲ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಮೊದಲನೇ ಮತ್ತು ಎರಡನೇ ಅಲೆಯಲ್ಲಿ ರಾಷ್ಟ್ರ ರಾಜಧಾನಿಯಿಂದ ಹಲವಾರು ಸೋಂಕಿತರು ಚಿಕಿತ್ಸೆಗೆಂದು ಪಂಜಾಬ್‌ಗೆ ಬಂದಿದ್ದಾರೆ. ದೆಹಲಿಯಲ್ಲಿ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ ಎಂದು ದೂರಿದ ಅವರು, ನಗರದಂತಹ ರಾಜ್ಯವನ್ನು ನಡೆಸದ ವ್ಯಕ್ತಿ ಸಂಪೂರ್ಣ ರಾಜ್ಯವನ್ನು ಹೇಗೆ ನಡೆಸುತ್ತಾನೆ ಎಂದು ವ್ಯಂಗ್ಯವಾಡಿದರು.
ಚುನಾವಣೆ ನಿಮಿತ್ತ ಕೇಜ್ರಿವಾಲ್ ಪಂಜಾಬ್‌ನಲ್ಲಿ ಪ್ರಚಾರ ಆರಂಭಿಸಿದ್ದು, ದೆಹಲಿ ಮಾದರಿಯಲ್ಲಿ ಪಂಜಾಬ್‌ನಲ್ಲೂ ಆರೋಗ್ಯ ಹಾಗೂ ಶಿಕ್ಷಣ ವ್ಯವಸ್ಥೆ ರೂಪಿಸುವುದಾಗಿ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ. ಆದರೆ ಇಂತಹ ನಾಟಕಗಳನ್ನು ಪಂಜಾಬ್ ಜನ ನಂಬುವುದಿಲ್ಲ ಎಂದರು. ಇದನ್ನೂ ಓದಿ: ದೇವಾಲಯದ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥ
ಇದೇ ವೇಳೆ ಕೊರೊನಾ ಮೂರನೇ ಅಲೆ ಬಗ್ಗೆ ಮಾತನಾಡಿದ ಅವರು, ಕೊರೊನಾ ಮತ್ತು ಓಮಿಕ್ರಾನ್ ಸಂಖ್ಯೆ ಇತ್ತೀಚೆಗೆ ಪುನಃ ಹೆಚ್ಚುತ್ತಿದೆ. ಕೊರೊನಾ 3ನೇ ಅಲೆಯನ್ನು ಎದುರಿಸಲು ನಮ್ಮ ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದರು. ಇದನ್ನೂ ಓದಿ: 12 ಸಾವಿರ NGOಗಳ ವಿದೇಶಿ ದೇಣಿಗೆ ಸ್ವೀಕಾರ ಪರವಾನಿಗೆ ರದ್ದು