ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ತಮ್ಮ ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಹೇಳಿದ್ದಾರೆ.
ಭಗವಂತ್ ಮಾನ್ ಅವರು ರಾಜ್ಯದ ಸಂಗ್ರೂರ್ ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಲೋಕಸಭಾ ಸಂಸದರಾಗಿದ್ದಾರೆ. ಸದ್ಯ ಈ ಕುರಿತಂತೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಮಾಹಿತಿ ನೀಡಿರುವ ಅವರು, ಇಂದು ದೆಹಲಿಗೆ ತೆರಳಿ ಸಂಗ್ರೂರ್ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಸಂಗ್ರೂರಿನ ಜನ ನನಗೆ ಇಷ್ಟು ವರ್ಷ ಪ್ರೀತಿ ಕೊಟ್ಟಿದ್ದಾರೆ. ಅವರಿಗೆ ಧನ್ಯವಾದಗಳು. ಈಗ ನನಗೆ ಇಡೀ ಪಂಜಾಬ್‍ಗೆ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿದ್ದು, ಕೆಲವೇ ತಿಂಗಳಲ್ಲಿ ಲೋಕಸಭೆಯಲ್ಲಿ ಅವರ ಧ್ವನಿಯನ್ನು ಮತ್ತೆ ಕೇಳಲಾಗುವುದು ಎಂದು ನಾನು ಸಂಗ್ರೂರ್ ಜನರಿಗೆ ಭರವಸೆ ನೀಡುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜಮ್ಮು, ಕಾಶ್ಮೀರ ಬಜೆಟ್ ಮಂಡಿಸಲಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
Advertisement
Advertisement
ಭಗವತ್ ಮಾನ್ ಅವರು ಮಾರ್ಚ್ 16ರಂದು ಮಧ್ಯಾಹ್ನ 12:30ಕ್ಕೆ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಹುಟ್ಟೂರಿನಲ್ಲಿ ಪಂಜಾಬ್‍ನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 117 ಸದಸ್ಯ ಬಲದ ಪಂಜಾಬ್ ವಿಧಾನಸಭೆಯಲ್ಲಿ ಆಪ್ ಪಕ್ಷ 92 ಸ್ಥಾನಗಳನ್ನು ಗೆದ್ದಿತು. ಇದನ್ನೂ ಓದಿ: 122 ಮಾಜಿ ಸಂಸದರು, ಶಾಸಕರ ಭದ್ರತೆ ಹಿಂಪಡೆದ ಭಗವಂತ್ ಮಾನ್