ಚಂಡೀಗಢ: ಹಿರಿಯ ಅಧಿಕಾರಿಗಳ ಮೇಲೆ ಗಂಭೀರ ಆರೋಪ ಮಾಡಿ ಸಹಾಯಕ ಸಬ್ ಇನ್‌ಸ್ಪೆಕ್ಟರ್ ಪೊಲೀಸ್ ಠಾಣೆಯೊಳಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಂಜಾಬ್‌ನಲ್ಲಿ ನಡೆದಿದೆ.
ಸತೀಶ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಹಿರಿಯ ಅಧಿಕಾರಿಗಳಿಂದ ತುಂಬಾ ತೊಂದರೆ ಅನುಭವಿಸಿದ್ದೇನೆ. ಹೀಗಾಗಿ ನನ್ನ ಜೀವನವನ್ನು ಕೊನೆಗೊಳಿಸುತ್ತಿದ್ದೇನೆ ಎಂದು ವೀಡಿಯೋ ಮಾಡಿ ನಂತರ ಪೊಲೀಸ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಠಾಣೆಯೊಳಗೆ ತನ್ನ ಸರ್ವಿಸ್ ರಿವಲ್ವಾರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಪರೀಕ್ಷೆ ಬರೆಯಲು ಈಜಿ ಚಂಪಾವತಿ ನದಿ ದಾಟಿದ ಯುವತಿ
Advertisement
Advertisement
ಹೋಶಿಯಾರ್‌ಪುರದ ಹರಿಯಾಣಾ ಪೊಲೀಸ್ ಠಾಣೆಯಲ್ಲಿ ನಿಯೋಜನೆಗೊಂಡಿದ್ದ ಸತೀಶ್ ಕುಮಾರ್, ಗುರುವಾರ ಪರಿಶೀಲನೆ ವೇಳೆ ತಾಂಡಾ ಪೊಲೀಸ್ ಠಾಣೆಯ ಠಾಣಾಧಿಕಾರಿ (ಎಸ್‌ಹೆಚ್‌ಒ) ಓಂಕಾರ್ ಸಿಂಗ್ ಅವರು ನನ್ನನ್ನು ನಿಂದಿಸಿದ್ದರು. ನನ್ನನ್ನು ಹೀಗೆ ಅವಮಾನಿಸುವುದಕ್ಕಿಂತ ಸುಮ್ಮನೆ ಗುಂಡು ಹಾರಿಸಿದ್ದರೆ ಚೆನ್ನಾಗಿರುತ್ತಿತ್ತು ಎಂದು ವೀಡಿಯೋದಲ್ಲಿ ನೋವು ಹೇಳಿಕೊಂಡಿದ್ದಾರೆ.
Advertisement
ಆತ್ಮಹತ್ಯೆ ಪ್ರಕರಣದ ನಂತರ ಎಸ್‌ಹೆಚ್‌ಒ ಅವರನ್ನು ಬೇರೆಡೆಗೆ ವರ್ಗಾಯಿಸಲಾಗಿದೆ. ಈ ಸಂಬಂಧ ತನಿಖೆಗೆ ಆದೇಶಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕ್ಯಾಮೆರಾವನ್ನು ಲೆಕ್ಕಿಸದೇ ಕಿತ್ತಾಡಿದ ಮಹಿಳಾ ಆಯೋಗದ ಅಧ್ಯಕ್ಷೆ – ಪೊಲೀಸ್ ಅಧಿಕಾರಿ
Advertisement
ಹೋಶಿಯಾರ್‌ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸರ್ತಾಜ್ ಸಿಂಗ್ ಚಾಹಲ್ ಅವರು, ಕಿರಿಯ ಪೊಲೀಸರಿಗೆ ಯಾವುದೇ ಸಮಸ್ಯೆ ಎದುರಾದರೂ ನನ್ನನ್ನು ಸಂಪರ್ಕಿಸಿ ಎಂದು ಮನವಿ ಮಾಡಿದ್ದಾರೆ.