ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ (Social Media) ಈಗ ರೀಲ್ಸ್ ಹವಾ ಜಾಸ್ತಿಯಾಗಿದೆ. ಅದರಲ್ಲೂ ಕೆಲ ಯುವತಿಯರು ಹಾಟ್ ಉಡುಗೆಗಳನ್ನ ತೊಟ್ಟು ಪಡ್ಡೆ ಹುಡುಗರ ನಿದ್ದೆಗೆಡಿಸುವಂತೆ ಡ್ಯಾನ್ಸ್ (Dance) ಮಾಡಿ ರೀಲ್ಸ್ ಕ್ರಿಯೇಟ್ ಮಾಡುವುದು ಟ್ರೆಂಡ್ ಆಗಿಬಿಟ್ಟಿದೆ. ಹೆಚ್ಚಿನ ವೀವ್ಸ್ಗಾಗಿ ಕಂಡ ಕಂಡ ಸ್ಥಳಗಳಲ್ಲಿ ವೀಡಿಯೋ ಮಾಡೋದಕ್ಕೆ ಶುರು ಮಾಡಿದ್ದಾರೆ.
ಹಾಗೆಯೇ ಪಂಜಾಬ್ನಲ್ಲಿ ಮಹಿಳೆಯೊಬ್ಬಳು ರೀಲ್ಸ್ಗಾಗಿ ಪೊಲೀಸ್ (Punjab Police) ವಾಹನ ಬಳಸಿಕೊಂಡಿದ್ದಾಳೆ. ಪಾಯಲ್ ಪರಮ್ ಎಂಬ ಮಹಿಳೆ ತನ್ನ ಇನ್ಸ್ಟಾಗ್ರಾಮ್ ರೀಲ್ಸ್ಗಾಗಿ (Insta Reels) ಪೊಲೀಸ್ ವಾಹನವನ್ನೇ ಬಳಸಿಕೊಂಡಿದ್ದಾಳೆ. ಈ ವೀಡಿಯೋ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದಂತೆ ಪೊಲೀಸ್ ವಾಹವನ್ನು ರೀಲ್ಸ್ ಮಾಡಲು ಅನುಮತಿ ನೀಡಿದ್ದ ಜಲಂಧರ್ ಪೊಲೀಸ್ ಠಾಣೆಯ ಅಧಿಕಾರಿಯನ್ನ ಅಮಾನತುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪೊಲೀಸ್ ವಾಹವನ್ನು ಬಳಸಿಕೊಂಡು ರೀಲ್ಸ್ ಮಾಡಿರುವ ಮಹಿಳೆ ಕಾರಿನ ಮುಂಭಾಗದ ಬಾನೆಟ್ ಮೇಲೆ ಕುಳಿತು ಪಂಜಾಬಿ ಹಾಡಿಗೆ ಸಖತ್ ಡಾನ್ಸ್ ಮಾಡಿದ್ದಾಳೆ. ಇದೇ ವೇಳೆ ಆಕ್ಷೇಪಾರ್ಹ ರೀತಿಯಲ್ಲಿ ಕೈಸನ್ನೆ ಮಾಡಿದ್ದಾಳೆ. ವೀಡಿಯೋ ಕೊನೆಯಲ್ಲಿ ಓರ್ವ ಪೊಲೀಸ್ ಅಧಿಕಾರಿಯೂ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ಹೈದರಾಬಾದ್ ಬಿರಿಯಾನಿ, ಬಟರ್ ಚಿಕನ್, ಲ್ಯಾಂಬ್ ಚಾಪ್ಸ್; ಭಾರತದಲ್ಲಿ ಪಾಕ್ ಕ್ರಿಕೆಟಿಗರಿಗೆ ಭರ್ಜರಿ ಬಾಡೂಟದ ಆತಿಥ್ಯ
ಈ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಮಹಿಳೆ ಹಾಗೂ ಪೊಲೀಸ್ ಅಧಿಕಾರಿಯ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಘಟನೆಯ ಕುರಿತು ತನಿಖೆ ಆರಂಭಿಸಿದ ಹಿರಿಯ ಅಧಿಕಾರಿಗಳು ಮಹಿಳೆಗೆ ಪೊಲೀಸ್ ವಾಹನ ನೀಡಿದ ಅಧಿಕಾರಿಯನ್ನ ಅಮಾನತುಗೊಳಿಸಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಬಂದ ಪಾಕ್ ತಂಡಕ್ಕೆ ಕೇಸರಿ ಶಾಲು ಹಾಕಿ ಸ್ವಾಗತ – ಬಾಬರ್ ಆಜಂ ಬಿಜೆಪಿ ಯುವನಾಯಕ ಎಂದು ಟ್ರೋಲ್
Web Stories