ಚಂಡೀಗಢ: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಪಂಜಾಬ್‍ಗೆ (Punjab) ಭೇಟಿ ನೀಡಿದ್ದ ಸಂದರ್ಭದಲ್ಲಿ ಭದ್ರತಾ ಲೋಪ ಎಸಗಿ, ಮೇಲ್ಸೇತುವೆ ಮೇಲೆ ದಿಗ್ಬಂಧನಕ್ಕೆ ಕಾರಣರಾದ ಆರೋಪದ ಮೇಲೆ 7 ಜನ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
ಎಸ್‌ಪಿ ಗುರ್ಬಿಂದರ್ ಸಿಂಗ್, ಡಿಎಸ್‌ಪಿ ಶ್ರೇಣಿಯ ಅಧಿಕಾರಿಗಳಾದ ಪರ್ಸನ್ ಸಿಂಗ್, ಜಗದೀಶ್ ಕುಮಾರ್, ಇನ್‌ಸ್ಪೆಕ್ಟರ್‌ಗಳಾದ ಜತೀಂದರ್ ಸಿಂಗ್, ಬಲ್ವಿಂದರ್ ಸಿಂಗ್, ಸಬ್ ಇನ್‌ಸ್ಪೆಕ್ಟರ್ ಜಸ್ವಂತ್ ಸಿಂಗ್, ಸಹಾಯಕ ಸಬ್ ಇನ್‌ಸ್ಪೆಕ್ಟರ್ ರಮೇಶ್ ಕುಮಾರ್ ಅವರನ್ನು ಅಮಾನತುಗೊಳಿಸಿ ಪಂಜಾಬ್ ಗೃಹ ಇಲಾಖೆ ಆದೇಶ ಹೊರಡಿಸಿದೆ. ಇದನ್ನೂ ಓದಿ: ದೇಶೀಯ ವಿಮಾನ ಪ್ರಯಾಣಿಕರ ಸಂಖ್ಯೆಯಲ್ಲಿ ಹೊಸ ದಾಖಲೆ
Advertisement
Advertisement
ಆದೇಶದಲ್ಲಿ ಘಟನೆಯ ಕುರಿತು ಅಕ್ಟೋಬರ್ 18, 2023ರ ವರದಿಯನ್ನು ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಸಲ್ಲಿಸಿದ್ದಾರೆ. ಇದರಲ್ಲಿ ರಾಜ್ಯ ಪೊಲೀಸ್ ಮುಖ್ಯಸ್ಥರು ಗುರ್ಬಿಂದರ್ ಸಿಂಗ್ ತಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಿಲ್ಲ ಎಂದು ಉಲ್ಲೇಖಿಸಿದ್ದಾರೆ. ಭದ್ರತಾ ಉಲ್ಲಂಘನೆಯ ಬಗ್ಗೆ ತನಿಖೆ ನಡೆಸಿದ ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯು ಈ ಹಿಂದೆ ಹಲವಾರು ಅಧಿಕಾರಿಗಳ ಲೋಪವನ್ನು ಪಟ್ಟಿ ಮಾಡಿತ್ತು.
Advertisement
Advertisement
2022 ರ ಜ.5 ರಂದು ಫಿರೋಜ್‍ಪುರದಲ್ಲಿ ಪ್ರತಿಭಟನಾಕಾರರ ದಿಗ್ಬಂಧನದಿಂದಾಗಿ ಪ್ರಧಾನಿ ಮೋದಿಯವರ ಬೆಂಗಾವಲು ಪಡೆ ಫ್ಲೈ ಓವರ್‌ಲ್ಲಿ ಸಿಕ್ಕಿಹಾಕಿಕೊಂಡಿತ್ತು. ನಂತರ ಅವರು ರ‍್ಯಾಲಿ ಸೇರಿದಂತೆ ಯಾವುದೇ ಕಾರ್ಯಕ್ರಮಗಳಿಗೆ ಹಾಜರಾಗದೆ ಪಂಜಾಬ್‍ನಿಂದ ಹಿಂದಿರುಗಿದ್ದರು. ಪಂಜಾಬ್ ವಿಧಾನಸಭಾ ಚುನಾವಣೆಗೂ ಮುನ್ನ ಭದ್ರತಾ ಲೋಪ ದೊಡ್ಡ ರಾಜಕೀಯ ವಿವಾದಕ್ಕೆ ಸಹ ಕಾರಣವಾಗಿತ್ತು. ಇದನ್ನೂ ಓದಿ: ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಲು ಬಿಜೆಪಿ ಮನವಿ