ಚಂಡೀಗಢ: ಅರವಿಂದ್ ಕೇಜ್ರಿವಾಲ್ ಮತ್ತು ಅವರ ದೆಹಲಿ ಕುಟುಂಬಸ್ಥರಾದ ರಾಘವ್ ಚಡ್ಡಾ, ಇತರ ಹೊರಗಿನವರು ಪಂಜಾಬ್ ಅನ್ನು ಲೂಟಿ ಮಾಡಲು ಬಂದಿದ್ದಾರೆ ಎಂದು ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ, ಆಮ್ ಆದ್ಮಿ ಪಕ್ಷವನ್ನು (ಎಎಪಿ) ಬ್ರಿಟಿಷ್ ರಾಜ್‍ಗೆ ಹೋಲಿಸಿದ್ದಾರೆ.
ಬ್ರಿಟಿಷರು ಭಾರತವನ್ನು ಲೂಟಿ ಮಾಡಲು ಹೇಗೆ ಬಂದಿದ್ದರು, ಅದೇ ರೀತಿ ಕೇಜ್ರಿವಾಲ್ ಮತ್ತು ರಾಘವ್ ಚಡ್ಡಾ ಸೇರಿದಂತೆ ಇತರ ಹೊರಗಿನವರು ಪಂಜಾಬ್ ಅನ್ನು ಲೂಟಿ ಮಾಡಲು ಬಂದಿದ್ದಾರೆ. ಆದರೆ ಮೊಘಲರು ಮತ್ತು ಬ್ರಿಟಿಷರಿಗೆ ತಮ್ಮ ಸ್ಥಾನವನ್ನು ತೋರಿಸಿದಂತೆ ಪಂಜಾಬ್ ಇವರಿಗೂ ತಮ್ಮ ಸ್ಥಾನವನ್ನು ತೋರಿಸುತ್ತದೆ ಎಂದು ಚನ್ನಿ ಹೇಳಿದ್ದಾರೆ. ಇದನ್ನೂ ಓದಿ: ಪತ್ನಿ ಬಿಟ್ಟು ಪ್ರೇಯಸಿಯನ್ನು ಮದುವೆಯಾಗಲು ಹೊರಟಿದ್ದ ಭೂಪ – ಕುಟುಂಬಸ್ಥರಿಂದಲೇ ಬಿತ್ತು ಗೂಸಾ
ಚಮ್ಕೌರ್ ಸಾಹಿಬ್ ವಿಧಾನಸಭಾ ಕ್ಷೇತ್ರದಲ್ಲಿನ ಅಕ್ರಮ ಗಣಿಗಾರಿಕೆ ಆರೋಪದಡಿ ರೋಪರ್ ಜಿಲ್ಲಾಡಳಿತ ಮತ್ತು ಪೊಲೀಸರಿಂದ ಕ್ಲೀನ್ ಚಿಟ್ ಪಡೆದ ಬಳಿಕ ಚರಣ್‍ಜಿತ್ ಸಿಂಗ್ ಚನ್ನಿ ಅವರು ಕೇಜ್ರಿವಾಲ್ ಅವರನ್ನು ಸುಳ್ಳುಗಾರ ಎಂದು ಕರೆದಿದ್ದಾರೆ. ಕೇಜ್ರಿವಾಲ್ ನನ್ನ ವಿರುದ್ಧ ಹಲವಾರು ಆರೋಪಗಳನ್ನು ಮಾಡಲು ಪ್ರಯತ್ನಿಸಿದರು. ಆದರೆ ಆದ್ಯಾವುದು ನಿಜವಲ್ಲ. ಕೇಜ್ರಿವಾಲ್ ನನ್ನ ವಿರುದ್ಧ ತನಿಖೆಗೆ ಒತ್ತಾಯಿಸಿ ರಾಜ್ಯಪಾಲರ ಬಳಿಗೆ ಹೋಗಿದ್ದರು. ಆದರೆ ಅಂತಿಮವಾಗಿ ಸತ್ಯ ಮೇಲುಗೈ ಸಾಧಿಸಿತು. ಸುಳ್ಳಿನ ಆಧಾರದ ಮೇಲೆ ಸರ್ಕಾರ ರಚನೆಯಾಗಲ್ಲ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಸುಳ್ಳುಗಾರರ ಪಕ್ಷ: ಅಖಿಲೇಶ್ ಯಾದವ್