ಚಂಡೀಗಢ: ಉತ್ತರಪ್ರದೇಶ ಹಾಗೂ ಬಿಹಾರದ ಜನರನ್ನು ಪಂಜಾಬ್‍ನಿಂದ ಹೊರಹಾಕಿ ಎಂಬ ವಿವಾದಾತ್ಮಕ ಹೇಳಿಕೆಗೆ ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಸ್ಪಷ್ಟನೆ ನೀಡಿದ್ದು, ತಮ್ಮ ಹೇಳಿಕೆಯನ್ನು ತಿರುಚಲಾಗಿದೆ ಎಂದು ಕಿಡಿಕಾರಿದರು.
ಆಮ್ ಆದ್ಮಿ ಪಕ್ಷದ ನಾಯಕರಾದ ದುರ್ಗೇಶ್ ಪಾಠಕ್, ಸಂಜಯ್ ಸಿಂಗ್ ಮತ್ತು ಅರವಿಂದ್ ಕೇಜ್ರಿವಾಲ್ ಅವರನ್ನು ಗುರಿಪಡಿಸಿ ಈ ಹೇಳಿಕೆಯನ್ನು ನೀಡಿದ್ದೇನೆ. ಆದರೆ ನಿನ್ನೆಯಿಂದ ನನ್ನ ಹೇಳಿಕೆಯನ್ನು ತಿರುಚಲಾಗಿದೆ. ಪಂಜಾಬ್‍ನ ಪ್ರಗತಿಗಾಗಿ ತಮ್ಮ ರಕ್ತ ಮತ್ತು ಬೆವರು ಸುರಿಸಿರುವವರ ಜೊತೆಗೆ ನಾವು ಪ್ರೀತಿಯ ಬಾಂಧವ್ಯವನ್ನು ಹೊಂದಿದ್ದೇವೆ ಎಂದರು.
ಪ್ರಿಯಾಂಕಾ ಗಾಂಧಿ ಪಂಜಾಬಿನ ಸೊಸೆ. ಉತ್ತರ ಪ್ರದೇಶ, ಬಿಹಾರ, ದೆಹಲಿ ಜನರು ಇಲ್ಲಿ ಬಂದು ಆಳಲು ಸಾಧ್ಯವಿಲ್ಲ. ನಾವು ಉತ್ತರಪ್ರದೇಶ ಜನರಿಂದ ಪಂಜಾಬ್‍ನ ದಾರಿ ತಪ್ಪಿಸಲು ಬಿಡುವುದಿಲ್ಲ ಎಂದು ನಿನ್ನೆ ನಡೆದ ಪ್ರಚಾರದ ಸಂದರ್ಭದಲ್ಲಿ ಹೇಳಿದ್ದರು. ಪಕ್ಕದಲ್ಲಿದ್ದ ಪ್ರಿಯಾಂಕಾ ಗಾಂಧಿ ಚಪ್ಪಾಳೆ ತಟ್ಟಿ ಮುಗುಳ್ನಕ್ಕಿದ್ದರು. ಇದನ್ನೂ ಓದಿ: ಮತಕ್ಕಾಗಿ ಕಾಂಗ್ರೆಸ್, ಪಂಜಾಬ್ ಸಿಎಂ ದೇಶವನ್ನು ವಿಭಜಿಸಲು ಯತ್ನಿಸುತ್ತಿದ್ದಾರೆ: ಯೋಗಿ ಆದಿತ್ಯನಾಥ್
ಈ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಪ್ರಧಾನಿ ಮೋದಿ, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸೇರಿದಂತೆ ಬಿಜೆಪಿ ನಾಯಕರು ಟೀಕೆ ಮಾಡಿದ್ದರು. ಜೊತೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಕಿಡಿಕಾರಿದ್ದರು. ಇದನ್ನೂ ಓದಿ: ಪಂಜಾಬ್‍ನಲ್ಲಿ ಬಿಹಾರದ ಜನತೆ ಎಷ್ಟಿದ್ದಾರೆ ಎನ್ನುವುದು ಕಾಂಗ್ರೆಸ್‍ಗೆ ತಿಳಿದಿದೆಯೇ: ನಿತೀಶ್ ಕುಮಾರ್ ಕಿಡಿ