LatestMain PostNational

ಆಪ್ ನಾಯಕರು ಬಿಜೆಪಿಗೆ ನಿಷ್ಠೆ ತೋರಿಸುತ್ತಿದ್ದಾರೆ: ಪ್ರಿಯಾಂಕಾ ಗಾಂಧಿ

ಚಂಡೀಗಢ: ಆಮ್ ಆದ್ಮಿ ಪಕ್ಷವು ಆರ್‌ಎಸ್‍ಎಸ್‍ನೊಂದಿಗೆ ಹೊರಹೊಮ್ಮಿದ್ದು, ಆಪ್ ನಾಯಕರು ಬಿಜೆಪಿಗೆ ನಿಷ್ಠೆಯನ್ನು ತೋರುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದರು.

ಕೊಟ್ಕಾಪುರದಲ್ಲಿ ನಡೆದ ಸಾರ್ವಜನಿಕ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಸೈದ್ಧಾಂತಿಕ ಸಿದ್ಧಾಂತಕ್ಕೆ ಬಿಜೆಪಿ ನಾಯಕರಿಗಿಂತ ಆಪ್ ಪಕ್ಷ ಹೆಚ್ಚು ಹತ್ತಿರವಾಗಿದ್ದೇವೆ ಎಂದು ಎಎಪಿ ನಾಯಕರೇ ಹೇಳುತ್ತಾರೆ ಎಂದು ವ್ಯಂಗ್ಯವಾಡಿದರು.

ದೆಹಲಿಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆಗಳ ಹೆಸರಿನಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ. ರಾಜಕೀಯ ಪಕ್ಷಗಳು ಮತ್ತು ಅವರ ನಾಯಕರ ಬಗ್ಗೆ ಸತ್ಯವನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ ಎಂದ ಅವರು, ಪಂಜಾಬ್‍ನ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ನಿಮ್ಮ ನಡುವಿನ ಸಾಮಾನ್ಯ ವ್ಯಕ್ತಿಯಾಗಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನೂ ಓದಿ: ಪ್ರಧಾನಿಗೆ ಭದ್ರತೆ ನೀಡಲು ಸಾಧ್ಯವಾಗದ ಚನ್ನಿ ಪಂಜಾಬ್‍ನ್ನು ಹೇಗೆ ಕಾಪಾಡಿಕೊಳ್ಳುವರು: ಅಮಿತ್ ಶಾ

ಕಳೆದ 5 ವರ್ಷಗಳಿಂದ ಪಂಜಾಬ್‍ನಲ್ಲಿ ನಾವು ಸರ್ಕಾರವನ್ನು ನಡೆಸುತ್ತಿದ್ದೇವೆ. ಇದಕ್ಕೂ ಮೊದಲು ಅಮರೀಂದರ್ ಸಿಂಗ್ ಬಿಜೆಪಿಯೊಂದಿಗೆ ಸಮ್ಮಿಶ್ರ ಸರ್ಕಾರ ಮಾಡಿಕೊಂಡಾಗ ಪಂಜಾಬ್‍ನಿಂದ ಕಾರ್ಯ ನಿರ್ವಹಿಸುವುದನ್ನು ನಿಲ್ಲಿಸಿತ್ತು. ಬದಲಿಗೆ ದೆಹಲಿಯಿಂದ ಕಾರ್ಯನಿರ್ವಹಿಸಿತ್ತು. ಬಿಜೆಪಿಯ ಗುಪ್ತ ಮೈತ್ರಿ ಈಗ ಸಾರ್ವಜನಿಕವಾಗಿ ಹೊರಬಂದಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಸ್ವಾತಂತ್ರ್ಯ ಪೂರ್ವದಿಂದಲೂ ಹಿಜಬ್‌ ಧರಿಸುತ್ತಿದ್ದಾರೆ: ಜಮೀರ್ ಅಹ್ಮದ್

ಫೆಬ್ರವರಿ 20ರಂದು ಪಂಜಾಬ್ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ. ರಾಜ್ಯದಲ್ಲಿ 2017ರ ವಿಧಾನಸಭಾ ಚುನಾವಣೆಯಲ್ಲಿ, ಕಾಂಗ್ರೆಸ್ 77 ಸ್ಥಾನಗಳನ್ನು ಗೆಲ್ಲುವ ಮೂಲಕ ಸಂಪೂರ್ಣ ಬಹುಮತವನ್ನು ಗಳಿಸಿತ್ತು. 10 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಎಸ್‍ಎಡಿ-ಬಿಜೆಪಿ ಸರ್ಕಾರವನ್ನು ಸೋಲಿಸಿ ಕಾಂಗ್ರೆಸ್ ಸರ್ಕಾರ ರಚಿಸಿತ್ತು.

Leave a Reply

Your email address will not be published.

Back to top button