ಚಂಡೀಗಢ: ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಇತರ ಪಕ್ಷಗಳ ವಿರುದ್ಧ ಕ್ಷುಲ್ಲಕವಾಗಿ ಆರೋಪಗಳನ್ನು ಮಾಡಿದ್ದ ಎಎಪಿ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಪಂಜಾಬ್ ಮುಖ್ಯ ಚುನಾವಣಾಧಿಕಾರಿ ಅವರು ಸಾಹಿಬ್ಜಾದಾ ಅಜಿತ್ ಸಿಂಗ್ ನಗರದ ಹಿರಿಯ ಎಸ್‌ಪಿಗೆ ಆದೇಶ ಹೊರಡಿಸಿದ್ದಾರೆ.
ಶಿರೋಮಣಿ ಅಕಾಲಿ ದಳದ ದೂರಿನನ್ವಯ ಕೇಜ್ರಿವಾಲ್ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಹಾಗೂ ಇತರೆ ಪಕ್ಷಗಳ ವಿರುದ್ಧ ಕ್ಷುಲ್ಲಕವಾಗಿ ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಿದೆ. ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಮುಖ್ಯಸ್ಥ ಸುಖ್‌ಬೀರ್ ಸಿಂಗ್ ಬಾದಲ್ ಅವರು ಚುನಾವಣಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವರ ವಿರುದ್ಧ ದಂಡದ ಕ್ರಮಕ್ಕೆ ಕೋರಿ ಆಮ್ ಆದ್ಮಿ ಪಕ್ಷ (ಎಎಪಿ) ಚುನಾವಣಾ ಆಯೋಗಕ್ಕೆ ಸಲ್ಲಿಸಿದ ದೂರಿನ ನಂತರ ಈ ಘಟನೆ ನಡೆದಿದೆ. ಇದನ್ನೂ ಓದಿ: ದೇಶದ ಮೊದಲ ಪ್ರಧಾನಿ ಶಂಕುಸ್ಥಾಪನೆ ಮಾಡಿದ್ದ ಯೋಜನೆಗಳು ಮೋದಿ ಸರ್ಕಾರದಿಂದ ಪೂರ್ಣ: ಅಮಿತ್ ಶಾ
Advertisement
Punjab: On AAP’s complaint, a case under Section 188 of IPC has been filed against CM Charanjit S Channi & Congress candidate Sidhu Moose Wala for holding a door-to-door campaign in Mansa constituency allegedly after end of campaigning y’day evening
(Visuals of the campaigning) pic.twitter.com/AbclUmqf1B
— ANI (@ANI) February 19, 2022
Advertisement
ಪ್ರಚಾರ ಮುಗಿದ ನಂತರವೂ ಮಾನಸಾ ಕ್ಷೇತ್ರದಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸಿಧು ಮೂಸ್ ವಾಲಾ ವಿರುದ್ಧವೂ ಪ್ರಕರಣ ದಾಖಲಾಗಿದೆ. ಎಎಪಿ ದೂರಿನ ಆಧಾರದ ಮೇಲೆ ಮಾನ್ಸಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಕೂಚ್ ಬೆಹಾರ್ ಪ್ರತ್ಯೇಕ ರಾಜ್ಯದ ಬೇಡಿಕೆ ಇಡುವವರ ಮೊಣಕಾಲು ಮುರಿಯುತ್ತೇವೆ: ಉದಯನ್ ಗುಹಾ