ಚಂಡೀಗಢ: ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರ ಮನೆಯಲ್ಲಿ ಸಂಭ್ರಮಾಚರಣೆ ಪ್ರಾರಂಭವಾಗಿದೆ. ಪಂಜಾಬ್ ವಿಧಾನಸಭಾ ಚುನಾವಣೆ ಮತ ಎಣಿಕೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಪಕ್ಷವು ಮುನ್ನಡೆ ಸಾಧಿಸುತ್ತಿದೆ.
Advertisement
ಭಗವಂತ್ ಮಾನ್ ಅವರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಧುರಿ ಕ್ಷೇತ್ರದಿಂದ ಮುನ್ನಡೆ ಸಾಧಿಸಿದ್ದಾರೆ. ತಮ್ಮ ಪ್ರತಿಸ್ಪರ್ಧಿ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ದಲ್ವಿರ್ ಸಿಂಗ್ ಗೋಲ್ಡಿ ಅವರಿಗಿಂತ ಮುಂದಿದ್ದಾರೆ. ಇದೀಗ ಸಂಗ್ರೂರ್‍ನಲ್ಲಿರುವ ಭಗವಂತ್ ಮಾನ್ ಅವರ ನಿವಾಸದಲ್ಲಿ ಎಎಪಿ ಕಾರ್ಯಕರ್ತರು ನೃತ್ಯ ಮಾಡುವ ಮೂಲಕ ಪಕ್ಷದ ಮುನ್ನಡೆಯನ್ನು ಸಂಭ್ರಮಿಸುತ್ತಿದ್ದಾರೆ. ಇದನ್ನೂ ಓದಿ: ಪಂಜಾಬ್‌ನಲ್ಲಿ AAP ಗೆದ್ದಿದ್ದು ಹೇಗೆ?
Advertisement
#WATCH | Celebrations at AAP’s CM candidate Bhagwant Mann’s residence in Sangrur as the party crosses the majority mark in Punjab. Mann leading from his seat Dhuri. #PunjabElections2022 pic.twitter.com/nzoJ9QyoJ1
— ANI (@ANI) March 10, 2022
Advertisement
ಈ ಮುನ್ನ ಎಎಪಿಯ ರಾಜ್ಯ ಘಟಕದ ಮುಖ್ಯಸ್ಥ ಭಗವಂತ್ ಮಾನ್ ಅವರು, ರಾಜ್ಯದಲ್ಲಿ ತಮ್ಮ ಪಕ್ಷವು ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಗಿ ಭದ್ರತೆಯ ನಡುವೆ ಇಂದು ಬೆಳಗ್ಗೆಯಿಂದ ಪಂಜಾಬ್‍ನ 117 ವಿಧಾನಸಭಾ ಕ್ಷೇತ್ರಗಳಲ್ಲಿ ಮತ ಎಣಿಕೆ ಆರಂಭವಾಗಿದೆ. 66 ಸ್ಥಳಗಳಲ್ಲಿ 117 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದ್ದು, 93 ಮಹಿಳೆಯರು ಮತ್ತು ಇಬ್ಬರು ತೃತೀಯಲಿಂಗಿಗಳು ಸೇರಿದಂತೆ ಒಟ್ಟು 1,304 ಅಭ್ಯರ್ಥಿಗಳು ಕಣಕ್ಕಿಳಿದ್ದಿದ್ದರು. ಇದನ್ನೂ ಓದಿ: ಪಂಜಾಬ್ ಫಲಿತಾಂಶ: 3ನೇ ಸ್ಥಾನಕ್ಕೆ ಕುಸಿದ ಸಿಧು