ಚಂಡೀಗಢ: ಪಂಜಾಬ್ ಮುಖ್ಯ ಮಂತ್ರಿ ಚರಣ್‌ಜಿತ್ ಸಿಂಗ್(ಚನ್ನಿ) ನಾಳೆ ಗವರ್ನರ್ ಬನ್ವರಿಲಾಲ್ ಪುರಾಹಿತ್ ಅವರನ್ನು ಭೇಟಿಯಾಗಿ ತಮ್ಮ ರಾಜಿನಾಮೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗುರುವಾರ ಮುಂಜಾನೆ ಚರಣ್‌ಜಿತ್ ತಮ್ಮ ಚಂಡೀಗಢದಲ್ಲಿರುವ ನಿವಾಸಕ್ಕೆ ಆಗಮಿಸಿದ್ದಾರೆ.
Advertisement
ಪಂಚರಾಜ್ಯ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಚರಣ್‌ಜಿತ್ ಸ್ಪರ್ಧಿಸುತ್ತಿರುವ ಎರಡು ಕ್ಷೇತ್ರಗಳಾದ ಚಮಕೌರ್ ಸಾಹಿಬ್ ಹಾಗೂ ಭದೌರ್ ಕ್ಷೇತ್ರಗಳಲ್ಲಿ ಸದ್ಯ ಹಿನ್ನೆಡೆಯಾಗಿದೆ. ಇದನ್ನೂ ಓದಿ: ಪಂಜಾಬ್ ಫಲಿತಾಂಶ: 3ನೇ ಸ್ಥಾನಕ್ಕೆ ಕುಸಿದ ಸಿಧು
Advertisement
Advertisement
ಇದೀಗ ಪಂಜಾಬ್‌ನಲ್ಲಿ ಕಾಂಗ್ರೆಸ್ ಸೋಲುವುದು ಬಹುತೇಕ ಖಚಿತವಾಗಿದ್ದು, ಪಂಜಾಬ್‌ನ ಮೊದಲ ದಲಿತ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ರಾಜಿನಾಮೆ ನೀಡಲಿದ್ದಾರೆ. ಇದನ್ನೂ ಓದಿ: ಪಂಜಾಬ್‍ನಲ್ಲಿ ಎಎಪಿ ಮುನ್ನಡೆ – ಭಗವಂತ್ ಮಾನ್ ಮನೆಯಲ್ಲಿ ಸಂಭ್ರಮಾಚರಣೆ ಶುರು
Advertisement
ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ ಮುನ್ನಡೆ(ಎಎಪಿ) ಕಂಡಿದ್ದು, ಕ್ಲೀನ್ ಸ್ವಿಪ್ ಸಾಧನೆಯತ್ತ ಸಾಗಿದೆ.