ಚಂಡೀಗಢ: ಪಂಜಾಬ್‍ನ ಎಎಪಿಯ ಸಿಎಂ ಅಭ್ಯರ್ಥಿಯಾಗಿರುವ ಭಗವಂತ್ ಮಾನ್ 58,206 ಮತದ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಪಂಜಾಬ್‍ನ ವಿಧಾನಸಭೆ ಚುನಾವಣೆಯಲ್ಲಿ ಆಪ್ ಪಕ್ಷ ಸ್ಪಷ್ಟ ಬಹುಮತ ಗಳಿಸಿದ್ದು, ಪಂಜಾಬ್‍ನಲ್ಲಿ ಅಧಿಕಾರ ಹಿಡಿಯಲು ಎಲ್ಲಾ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಭಗವಂತ್ ಮಾನ್ ದುರಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಇವರ ವಿರುದ್ಧ ಸ್ಪರ್ಧಿಸಿದ್ದ ಕಾಂಗ್ರೆಸ್‍ನ ದಲ್ವಿರ್‍ಸಿಂಗ್ ಗೋಲ್ಡಿ 24,306 ಮತಗಳಿಸಿದ್ದು, ಭಗವಂತ್ ಮಾನ್‍ಗೆ 82,023 ಮತಗಳನ್ನು ಗಳಿಸಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ.
Advertisement
Advertisement
ಈ ಬಗ್ಗೆ ಮಾತನಾಡಿದ ಅವರು, ತಮ್ಮ ಪ್ರಮಾಣವಚನ ಸ್ವೀಕಾರ ಸಮಾರಂಭವು ರಾಜಭವನದಲ್ಲಿ ನಡೆಯುವುದಿಲ್ಲ. ಬದಲಿಗೆ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಪೂರ್ವಜರ ಗ್ರಾಮವಾದ ನವಾನ್‍ಶಹರರ ಜಿಲ್ಲೆಯ ಖಟ್ಕರ್ಕಲನ್‍ನಲ್ಲಿ ನಡೆಸಲಾಗುವುದು. ದಿನಾಂಕವನ್ನು ನಂತರದಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಉತ್ತರಾಖಂಡ್‌ನಲ್ಲಿ ಬಿಜೆಪಿ ಗೆದ್ದಿದ್ದು ಹೇಗೆ?
Advertisement
ಯಾವುದೇ ಸರ್ಕಾರಿ ಕಚೇರಿಯಲ್ಲಿ ಮುಖ್ಯಮಂತ್ರಿಯವರ ಚಿತ್ರವಿರುವುದಿಲ್ಲ, ಬದಲಿಗೆ ಭಗತ್ ಸಿಂಗ್ ಮತ್ತು ಬಿಆರ್ ಅಂಬೇಡ್ಕರ್ ಅವರ ಚಿತ್ರಗಳು ಇರುತ್ತವೆ ಎಂದು ಘೋಷಿಸಿದರು.
Advertisement
ಅಧಿಕಾರ ವಹಿಸಿಕೊಂಡ ನಂತರ ಅವರ ಮೊದಲ ವ್ಯವಹಾರದ ಆದೇಶವೆಂದರೆ ಶಾಲೆಗಳು, ಆರೋಗ್ಯ, ಉದ್ಯಮ, ಕೃಷಿಯನ್ನು ಲಾಭದಾಯಕವಾಗಿಸುವುದಾಗಿದೆ. ಜೊತೆಗೆ ಮಹಿಳೆಯರ ಸುರಕ್ಷತೆ ಮತ್ತು ಕ್ರೀಡಾ ಮೂಲಸೌಕರ್ಯಗಳನ್ನು ಸುಧಾರಿಸುವುದಾಗಿದೆ ಎಂದ ಅವರು, ಒಂದು ತಿಂಗಳೊಳಗೆ ಪಂಜಾಬ್‍ನಲ್ಲಿ ಬದಲಾವಣೆಯನ್ನು ಕಾಣುತ್ತೀರಿ ಎಂದು ಭರವಸೆ ನೀಡಿದರು. ಇದನ್ನೂ ಓದಿ: ನಾನು ಆತಂಕವಾದಿಯಲ್ಲ ಎಂದು ಮತದಾರರು ಸಾಬೀತು ಮಾಡಿದ್ದಾರೆ: ಕೇಜ್ರಿವಾಲ್
ಆಮ್ ಆದ್ಮಿ ಪಕ್ಷವು ಪಂಜಾಬ್‍ನಲ್ಲಿ 117 ವಿಧಾನಸಭಾ ಸ್ಥಾನಗಳ ಪೈಕಿ 91 ರಲ್ಲಿ ಮುನ್ನಡೆ ಸಾಧಿಸುವ ಮೂಲಕ ಕ್ಲೀನ್ ಸ್ವೀಪ್ ಮಾಡಿದೆ.