ಚಂಡೀಗಢ: ಶಾಲೆಯೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ (Gas leak) ಹಲವಾರು ವಿದ್ಯಾರ್ಥಿಗಳು (Students) ಮತ್ತು ಶಿಕ್ಷಕರು (Teachers) ಪ್ರಜ್ಞಾಹೀನರಾದ (Unconscious) ಘಟನೆ ಪಂಜಾಬ್‍ನಲ್ಲಿ (Punjab) ಗುರುವಾರ ನಡೆದಿದೆ.
Advertisement
ಅಸ್ವಸ್ಥಗೊಂಡ ಮಕ್ಕಳು ಹಾಗೂ ಶಿಕ್ಷಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಶಾಲೆಯನ್ನು ಮುಚ್ಚಲಾಗಿದ್ದು, ಉಳಿದ ಮಕ್ಕಳು ಹಾಗೂ ಸಿಬ್ಬಂದಿಯನ್ನು ಪೊಲೀಸರು ಬೇರೆಡೆಗೆ ಸ್ಥಳಾಂತರಿಸಿದ್ದಾರೆ. ಘಟನೆಗೆ ಕಾರಣವೇನೆಂದು ಪರಿಶೀಲನೆ ನಡೆಸಲಾಗುತ್ತಿದೆ. ಶಾಲೆಯ ಸಮೀಪದಲ್ಲಿರುವ ಎರಡು ದೊಡ್ಡ ಕೈಗಾರಿಕಾ ಘಟಕಗಳು ಅನಿಲ ಸೋರಿಕೆಯ ಮೂಲಗಳೆಂದು ಶಂಕಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಪಂಜಾಬ್ ಸ್ಫೋಟ ಪ್ರಕರಣ – ಐವರು ಆರೋಪಿಗಳ ಬಂಧನ
Advertisement
Advertisement
ಸ್ಥಳದಲ್ಲಿ ಯಾವುದೇ ಅನಾಹುತಗಳು ನಡೆಯದಂತೆ ಸೂಕ್ತ ಕ್ರಮಕೈಗೊಳ್ಳಲಾಗಿದೆ. ಜಿಲ್ಲೆಯ ಎಲ್ಲಾ ಅಂಬುಲೆನ್ಸ್‌ಗಳನ್ನು ಘಟನಾ ಸ್ಥಳದಲ್ಲಿ ಇರಿಸಲಾಗಿದೆ ಎಂದು ಪಂಜಾಬ್ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.
Advertisement
ಇತ್ತೀಚೆಗೆ ಪಂಜಾಬ್‍ನ ಲುಧಿಯಾನಾದ (Ludhiana) ಗಿಯಾಸ್‍ಪುರ ಪ್ರದೇಶದಲ್ಲಿ ಅನಿಲ ಸೋರಿಕೆ ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ 11 ಜನ ಸಾವನ್ನಪ್ಪಿದ್ದರು. ಇದನ್ನೂ ಓದಿ: ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು