ಚಂಡೀಗಢ: ಪಂಜಾಬ್ (Punjab) ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ಅವರು ತಮ್ಮ ಬಹುಮತವನ್ನು ಸಾಬೀತುಪಡಿಸಲು ವಿಶೇಷ ಅಧಿವೇಶನವನ್ನು (Special Session) ಕರೆದಿದ್ದರು. ಆದರೆ ಪಂಜಾಬ್‌ನ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ (Banwarilal Purohit) ಅವರು ಇದಕ್ಕೆ ಅನುಮತಿಯನ್ನು ನಿರಾಕರಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ (BJP) ತನ್ನ ಸರ್ಕಾರವನ್ನು ಬೀಳಿಸಲು ಪ್ರಯತ್ನಿಸುತ್ತಿದೆ ಎಂದು ಎಎಪಿ (AAP) ಈ ಹಿಂದೆ ಆರೋಪಿಸಿತ್ತು. ಈ ಹಿನ್ನೆಲೆ ಸೋಮವಾರ ಭಗವಂತ್ ಮಾನ್ ಅವರು ಗುರುವಾರ ವಿಶ್ವಾಸಮತ ಯಾಚನೆ ಮಾಡುವುದಾಗಿ ಹೇಳಿದ್ದರು. ಆದರೆ ವಿಶ್ವಾಸಮತ ಸಾಬೀತುಪಡಿಸಲು ಕರೆದಿರುವ ಅಧಿವೇಶನ ನಿಯಮಾನುಸಾರವಾಗಿಲ್ಲ ಎಂದು ರಾಜಭವನ ವಿಶೇಷ ಅಧಿವೇಶನದ ಆದೇಶವನ್ನು ರದ್ದುಗೊಳಿಸಿದೆ. ಇದನ್ನೂ ಓದಿ: ʼPAY CMʼ ಪೋಸ್ಟರ್ ಅಂಟಿಸಿದ ಪ್ರಕರಣ ಸಿಸಿಬಿಗೆ ವರ್ಗಾವಣೆ
Advertisement
Advertisement
ಪ್ರತಿಪಕ್ಷ ನಾಯಕ ಪ್ರತಾಪ್ ಸಿಂಗ್ ಬಾಜ್ವಾ, ಕಾಂಗ್ರೆಸ್ ನಾಯಕ ಸುಖಪಾಲ್ ಸಿಂಗ್ ಖೈರಾ ಹಾಗೂ ಪಂಜಾಬ್ ಬಿಜೆಪಿ ಮುಖ್ಯಸ್ಥ ಅಶ್ವನಿ ಶರ್ಮ ಅವರು ಕೇವಲ ವಿಶ್ವಾಸ ನಿರ್ಣಯ ಮಂಡಿಸಲು ವಿಧಾನಸಭೆಯ ವಿಶೇಷ ಅಧಿವೇಶನವನ್ನು ಕರೆಯಲು ಯಾವುದೇ ಕಾನೂನು ಅವಕಾಶವಿಲ್ಲ ಎಂದು ವಾದಿಸಿದ್ದಾರೆ. ಈ ಹಿನ್ನೆಲೆ ರಾಜ್ಯಪಾಲರು ಈ ನಿರ್ಣಯವನ್ನು ಕೈಗೊಂಡಿದ್ದಾರೆ. ಇದನ್ನೂ ಓದಿ: ಭಾರತ್ ಜೋಡೋ ಪೋಸ್ಟರ್‌ನಲ್ಲಿ ಸಾವರ್ಕರ್ ಫೋಟೋ – ಪ್ರಿಂಟಿಂಗ್ ಮಿಸ್ಟೇಕ್ ಎಂದ ಕಾಂಗ್ರೆಸ್
Advertisement
ಈ ಬೆಳವಣಿಗೆಯ ಬಳಿಕ ಟ್ವೀಟ್ ಮಾಡಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಸಂಪುಟ ಕರೆದ ಅಧಿವೇಶನವನ್ನು ರಾಜ್ಯಪಾಲರು ಹೇಗೆ ನಿರಾಕರಿಸಲು ಸಾಧ್ಯ? ಪ್ರಜಾಪ್ರಭುತ್ವ ಕೊನೆಗೊಂಡಿದೆ ಎನ್ನಲು ಇದುವೇ ಸಾಕ್ಷಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.