ಲಕ್ನೋ: ಪ್ರಭಸಿಮ್ರನ್ ಸಿಂಗ್ (Prabhsimran Singh) ಮತ್ತು ಶ್ರೇಯಸ್ ಅಯ್ಯರ್ (Shreyas Iyer) ಅವರ ಆಕರ್ಷಕ ಅರ್ಧಶತಕದ ನೆರವಿನಿಂದ ಪಂಜಾಬ್ ಕಿಂಗ್ಸ್ (Punjab Kings) ಲಕ್ನೋ ಸೂಪರ್ ಜೈಂಟ್ಸ್ (Lucknow Super Giants) ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ 7 ವಿಕೆಟ್ ನಷ್ಟಕ್ಕೆ 171 ರನ್ ಹೊಡೆಯಿತು. ಗುರಿ ಬೆನ್ನಟ್ಟಿದ ಪಂಜಾಬ್ 16.2 ಓವರ್‌ಗಳಲ್ಲಿ 177 ರನ್ ಹೊಡೆಯಿತು. ಇದನ್ನೂ ಓದಿ: ಸಿಡ್ನಿ ಸಿಕ್ಸರ್ ಪರ ಆಡಲಿದ್ದಾರೆ ಕೊಹ್ಲಿ!
Statement victory ✅
Skipper’s second 5⃣0⃣ this season ✅
Consecutive wins ✅
Punjab Kings cap off a perfect day 🙌#TATAIPL | #LSGvPBKS | @PunjabKingsIPL pic.twitter.com/HSrX8KwiY4
— IndianPremierLeague (@IPL) April 1, 2025
ಪಂಜಾಬ್ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿಹಾಕುವಲ್ಲಿ ಲಕ್ನೋ ವಿಫಲವಾಯ್ತು. ಪ್ರಿಯಾಂಶ್ ಆರ್ಯ 8 ರನ್ ಗಳಿಸಿ ಔಟಾದರೂ ಎರಡನೇ ವಿಕೆಟಿಗೆ ಪ್ರಭಸಿಮ್ರನ್ ಸಿಂಗ್ ಮತ್ತು ಶ್ರೇಯಸ್ ಅಯ್ಯರ್ 44 ಎಸೆತಗಳಲ್ಲಿ 84 ರನ್ ಜೊತೆಯಾಟವಾಡುವಾಗಲೇ ಪಂಜಾಬ್ ಜಯ ಖಚಿತವಾಗಿತ್ತು. ಮುರಿಯದ ಮೂರನೇ ವಿಕೆಟಿಗೆ ಶ್ರೇಯಸ್ ಮತ್ತು ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕೆ ಇಳಿದ ನೆಹಾಲ್ ವಧೇರಾ 37 ಎಸೆತಗಳಲ್ಲಿ 67 ರನ್ ಜೊತೆಯಾಟವಾಡುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟರು. ಇದನ್ನೂ ಓದಿ: ಐಪಿಎಲ್‌ನಿಂದ ಬ್ಯಾನ್ ಮಾಡಿ – ರಿಯಾನ್ ಪರಾಗ್ ವಿರುದ್ಧ ರೊಚ್ಚಿಗೆದ್ದ ಫ್ಯಾನ್ಸ್
ಪ್ರಭಸಿಮ್ರನ್ ಸಿಂಗ್ 69 ರನ್ (34 ಎಸೆತ, 9 ಬೌಂಡರಿ, 3 ಸಿಕ್ಸ್), ಶ್ರೇಯಸ್ ಅಯ್ಯರ್ ಔಟಾಗದೇ 52 ರನ್(30 ಎಸೆತ, 3 ಬೌಂಡರಿ, 4 ಸಿಕ್ಸ್), ನೆಹಾಲ್ ವಧೇರಾ ಔಟಾಗದೇ 43 ರನ್ ( 25 ಎಸೆತ, 3 ಬೌಂಡರಿ, 4 ಸಿಕ್ಸ್) ಸಿಡಿಸಿದರು.
The 6⃣🔥
The Catch 🤌
Both approved by Ricky Ponting 😌
Updates ▶ https://t.co/j3IRkQFrAa #TATAIPL | #LSGvPBKS | @PunjabKingsIPL pic.twitter.com/XSuat7Wy1H
— IndianPremierLeague (@IPL) April 1, 2025
ಮೊದಲು ಬ್ಯಾಟ್ ಮಾಡಿದ ಲಕ್ನೋ ಪರ ನಿಕೂಲಸ್ ಪೂರನ್ 44 ರನ್ (30 ಎಸೆತ, 5 ಬೌಂಡರಿ, 2 ಸಿಕ್ಸ್), ಆಯುಷ್ ಬದೋನಿ 41 ರನ್(33 ಎಸೆತ, 1 ಬೌಂಡರಿ, 3 ಸಿಕ್ಸ್) ಸಿಡಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು.
ಈ ಜಯದಿಂದ ಐದನೇ ಸ್ಥಾನದಲ್ಲಿದ್ದ ಪಂಜಾಬ್ ಎರಡನೇ ಸ್ಥಾನಕ್ಕೆ ಜಿಗಿದರೆ ಮೂರನೇ ಸ್ಥಾನದಲ್ಲಿದ್ದ ಲಕ್ನೋ ಆರನೇ ಸ್ಥಾನಕ್ಕೆ ಜಾರಿದೆ.