ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಇಂದು ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ಭ್ರಷ್ಟಾಚಾರದ ಆರೋಪದ ಮೇಲೆ ಸಂಪುಟದಿಂದ ವಜಾಗೊಳಿಸಿದ್ದಾರೆ ಎಂದು ವರದಿಯಾಗಿದೆ.
ಸಿಂಗ್ಲಾ ಅವರು ಟೆಂಡರ್‌ಗಳಲ್ಲಿ ಶೇಕಡಾ ಒಂದರಷ್ಟು ಕಮಿಷನ್‌ಗೆ ಬೇಡಿಕೆ ಇಡುತ್ತಿದ್ದರು ಎನ್ನಲಾಗಿದೆ. ಅವರನ್ನು ಪದಚ್ಯುತಿಗೊಳಿಸಿದ ಕೂಡಲೇ ಪಂಜಾಬ್ ಭ್ರಷ್ಟಾಚಾರ ನಿಗ್ರಹ ದಳದಿಂದ ಬಂಧಿಸಲಾಯಿತು. ಇದನ್ನೂ ಓದಿ: ವಂದೇ ಮಾತರಂಗೂ ರಾಷ್ಟ್ರಗೀತೆಯಷ್ಟೇ ಗೌರವ ಕೋಡಿ – ದೆಹಲಿ ಹೈಕೋರ್ಟ್‌ಗೆ ಪಿಐಎಲ್
Advertisement
Advertisement
ಸಚಿವರ ವಿರುದ್ಧ ದೂರು ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಭಗವಂತ್ ಮಾನ್ ಈ ಕ್ರಮ ಕೈಗೊಂಡಿದ್ದಾರೆ. ಮುಖ್ಯಮಂತ್ರಿಯೊಬ್ಬರು ತಮ್ಮದೇ ಸಂಪುಟ ಸಚಿವರ ವಿರುದ್ಧ ಈ ರೀತಿಯ ಕಠಿಣ ಕ್ರಮ ಕೈಗೊಂಡಿರುವುದು ದೇಶದ ಇತಿಹಾಸದಲ್ಲಿ ಇದು ಎರಡನೇ ಬಾರಿ. ಇದಕ್ಕೂ ಮೊದಲು, ಆಮ್ ಆದ್ಮಿ ಪಕ್ಷದ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು 2015 ರಲ್ಲಿ ಭ್ರಷ್ಟಾಚಾರ ಆರೋಪದ ಮೇಲೆ ತಮ್ಮ ಸಂಪುಟದ ಸಚಿವರೊಬ್ಬರನ್ನು ವಜಾಗೊಳಿಸಿದ್ದರು.
Advertisement
ಭ್ರಷ್ಟಾಚಾರವನ್ನು ಸಹಿಸಲಾಗುವುದಿಲ್ಲ ಎಂದು ಸಿಎಂ ಭಗವಂತ್ ಮಾನ್ ವೀಡಿಯೋದಲ್ಲಿ ಸಂದೇಶ ರವಾನಿಸಿದ್ದಾರೆ. ʼಸಿಂಗ್ಲಾ ಅವರು ಭ್ರಷ್ಟಾಚಾರ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಜನರು ಸಾಕಷ್ಟು ಭರವಸೆಯೊಂದಿಗೆ ಎಎಪಿಗೆ ಮತ ಹಾಕಿದ್ದಾರೆ. ನಾವು ಅದನ್ನು ಉಳಿಸಿಕೊಳ್ಳಬೇಕು. ಭಾರತ ಮಾತೆಗೆ ಅರವಿಂದ್ ಕೇಜ್ರಿವಾಲ್ ಅವರಂತಹ ಮಗ ಮತ್ತು ಭಗವಂತ್ ಮಾನ್ ಅವರಂತಹ ಸೈನಿಕ ಇರುವವರೆಗೂ ಭ್ರಷ್ಟಾಚಾರದ ವಿರುದ್ಧದ ಮಹಾಯುದ್ಧ ಮುಂದುವರಿಯುತ್ತದೆʼ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕುತುಬ್ ಮಿನಾರ್ ಬಳಿ ಪೂಜೆ ಮಾಡುವ ಹಕ್ಕು ಯಾರಿಗೂ ಇಲ್ಲ – ASI ಖಡಕ್ ಉತ್ತರ
Advertisement
Proud of you Bhagwant. Ur action has brought tears to my eyes.
Whole nation today feels proud of AAP https://t.co/glg6LxXqgs
— Arvind Kejriwal (@ArvindKejriwal) May 24, 2022
ಅರವಿಂದ್ ಕೇಜ್ರಿವಾಲ್ ಅವರ ಭ್ರಷ್ಟಾಚಾರ ವಿರೋಧಿ ಮಾದರಿಗೆ ಅನುಗುಣವಾಗಿ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಪಕ್ಷ ಹೇಳಿದೆ. ಸಿಂಗ್ಲಾ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ.
ಭಗವಂತ್ ಮಾನ್ ಅವರ ನಿರ್ಧಾರವನ್ನು ಪ್ರಶಂಶಿಸಿ ಟ್ವೀಟ್ ಮಾಡಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ನಿಮ್ಮ ಬಗ್ಗೆ ಹೆಮ್ಮೆ ಇದೆ ಭಗವಂತ್ ಮಾನ್. ನಿಮ್ಮ ಕಾರ್ಯ ನನ್ನ ಕಣ್ಣಲ್ಲಿ ನೀರು ತರಿಸಿದೆ. ಇಡೀ ರಾಷ್ಟ್ರ ಇಂದು ಎಎಪಿ ಬಗ್ಗೆ ಹೆಮ್ಮೆ ಪಡುತ್ತಿದೆ ಎಂದು ಹೇಳಿದ್ದಾರೆ.