ಧಾರವಾಡ: ಪಂಜಾಬ್‍ನಲ್ಲಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರಿಗಾದ ಅವಮಾನ ಖಂಡಿಸಿ ನಗರದ ಜಿಲ್ಲಾ ಬಿಜೆಪಿ ಕಾರ್ಯಕರ್ತರ ವತಿಯಿಂದ ಪ್ರತಿಭಟನೆ ನಡೆಸಿದ್ದಾರೆ.
Advertisement
ನಗರದ ಸುಭಾಸ ರಸ್ತೆಯ ಬಿಜೆಪಿ ಕಚೇರಿಯಿಂದ ರಿಗಲ್ ವೃತದ ಕಾಂಗ್ರೆಸ್ ಕಚೇರಿವರೆಗೆ ರ್ಯಾಲಿ ನಡೆಸಿದ್ದು, ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆ ಕೂಗಿದ್ದಾರೆ. ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ನಡೆಸಿದ್ದು, ಪಂಜಾಬ್ ಸಿಎಂ ಭಾವಚಿತ್ರ ಸುಟ್ಟು ರ್ಯಾಲಿ ಮಾಡಿ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನನ್ನ ಹೆಸರು Kovid, ಆದ್ರೆ ನಾನು ವೈರಸ್ ಅಲ್ಲ: ಬೆಂಗಳೂರು ಉದ್ಯಮಿ
Advertisement
ಪ್ರತಿಭಟನೆ ವೇಳೆ ಕೆಲ ಬಿಜೆಪಿ ಕಾರ್ಯಕರ್ತರು ಮಾಸ್ಕ್ ಇಲ್ಲದೇ ಬಂದಿದ್ದು, ಇನ್ನೂ ಸಾಮಾಜಿಕ ಅಂತರ ಕೂಡಾ ಇಲ್ಲದೇ ಪ್ರತಿಭಟನೆ ನಡೆಸಿರುವುದು ಕಂಡುಬಂತು. ಪ್ರತಿಭಟನೆ ವೇಳೆ ಕಾರ್ಯಕರ್ತರು ಟಯರ್ ಸುಟ್ಟು ಆಕ್ರೋಶ ವ್ಯಕ್ತಪಡಿಸುತ್ತಿದ್ದ ಸಂದರ್ಭದಲ್ಲಿ ನಗರದ ಇನ್ಸ್ ಪೆಕ್ಟರ್‍ರೊಬ್ಬರು ಟಯರ್‍ಗೆ ನೀರು ಹಾಕಿದ್ದು, ಬಿಜೆಪಿ ಮಾಜಿ ಶಾಸಕಿ ಸೀಮಾ ಮಸೂತಿ ಇನ್ಸ್ ಪೆಕ್ಟರ್‍ನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನೀವು ಕಾಂಗ್ರೆಸ್‍ಗೆ ಬೆಂಬಲ ಕೊಡುತ್ತೀರಾ ಎಂದು ಅವಾಜ್ ಹಾಕಿದ್ದಾರೆ. ಇದನ್ನೂ ಓದಿ: ವಯೋಮಿತಿ ಏರಿಕೆ ಭೀತಿ- ಮುಸ್ಲಿಮರು ತರಾತುರಿ ಲಗ್ನ
Advertisement
Advertisement
ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಪಂಜಾಬ್‍ಗೆ ಪ್ರಧಾನಿ ನರೇಂದ್ರ ಮೋದಿ ತೆರಳಿದ್ದ ವೇಳೆ ಭದ್ರತಾ ಲೋಪದಿಂದ ಫೈಓವರ್‍ನಲ್ಲಿ ಸುಮಾರು 20 ನಿಮಿಷಗಳ ಕಾಲ ಸಿಲುಕಿಕೊಂಡಿದ್ದರು. ಈ ಘಟನೆಗೆ ಪಂಜಾಬ್ ಪೊಲೀಸ್ ಇಲಾಖೆ ನೇರ ಕಾರಣ ಎಂದು ಕೇಂದ್ರ ಗೃಹ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಆರೋಪಿಸಿದ್ದರು.