– ಪಾಕ್ ಉಗ್ರ ಸಂಪರ್ಕದ ಬಗ್ಗೆ ತನಿಖೆ
ಚಂಡೀಗಢ: ಪಂಜಾಬ್ ಪೊಲೀಸ್ ಸಹಾಯಕ ಸಬ್ಇನ್ಸ್ಪೆಕ್ಟರ್ (Assistant Sub-Inspector) ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಇಬ್ಬರಲ್ಲಿ ಓರ್ವ ಪೊಲೀಸ್ ಎನ್ಕೌಂಟರ್ನಲ್ಲಿ (Encounter) ಮೃತಪಟ್ಟಿದ್ದಾನೆ.
ಮೃತ ಆರೋಪಿಯನ್ನು ಅಮೃತಸರದ ಮುಲ್ಚಕ್ ನಿವಾಸಿ ದೀಪಕ್ ಸಿಂಗ್ ಎಂದು ಗುರುತಿಸಲಾಗಿದೆ. ಶುಕ್ರವಾರ ಹಿರಿಯ ಪೊಲೀಸ್ ಅಧಿಕಾರಿ ಹರ್ಜಿತ್ ಸಿಂಗ್ ಹಾಗೂ ಅವರ ಸಹಾಯಕನನ್ನು ಹಿಂಬಾಲಿಸಿ ಗುಂಡಿಕ್ಕಿ ಹತ್ಯೆ ಮಾಡಿದ್ದ ಆರೋಪ ದೀಪಕ್ ಸಿಂಗ್ ಸೇರಿದಂತೆ ಇಬ್ಬರ ಮೇಲಿತ್ತು. ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ಸಿಸಿಟಿವಿ ದೃಶ್ಯಗಳು, ತಾಂತ್ರಿಕ ಮಾಹಿತಿ, ಟವರ್-ಡಂಪ್ ವಿಶ್ಲೇಷಣೆ, ಸ್ಥಳೀಯ ಗುಪ್ತಚರ ಮಾಹಿತಿ ಹಾಗೂ ಮಾನವ ಮೂಲಗಳ ನೆರವು ಪಡೆದಿದ್ದರು. ಇದನ್ನೂ ಓದಿ: ಸುಳ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಿಸಿ: ಸಿಎಂಗೆ NSUI ಉಪಾಧ್ಯಕ್ಷ ಕೀರ್ತನ್ ಗೌಡ ಮನವಿ
ಈ ಮಾಹಿತಿ ಆಧರಿಸಿ ಪೊಲೀಸರು ಆರೋಪಿಗಳ ಚಲನವಲನ ಪತ್ತೆಹಚ್ಚಿದ್ದರು. ರಾತ್ರಿ ಸುಮಾರು 9:45ರ ವೇಳೆಗೆ ಪೊಲೀಸ್ ಚೆಕ್ಪೋಸ್ಟ್ ಬಳಿ ಸ್ಕೂಟರ್ನಲ್ಲಿ ಬಂದಿದ್ದ ಇಬ್ಬರು ಶಂಕಿತರನ್ನು ಪೊಲೀಸರು ನಿಲ್ಲಿಸಲು ಸೂಚಿಸಿದ್ದರು. ಈ ವೇಳೆ ಆರೋಪಿಗಳು ಪೊಲೀಸರತ್ತ ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಳಿಕ ಪೊಲೀಸರು ಆತ್ಮರಕ್ಷಣೆಗಾಗಿ ಪ್ರತಿದಾಳಿ ನಡೆಸಿದ್ದಾರೆ. ಇದನ್ನೂ ಓದಿ: ರಾಜ್ಯದ ಜೈಲುಗಳಲ್ಲಿ ಟಫ್ ರೂಲ್ಸ್ನಿಂದ ಕಡಿವಾಣ; 9 ತಿಂಗಳಲ್ಲಿ 410 ಮೊಬೈಲ್ಗಳ ಪತ್ತೆ
ಪೊಲೀಸರ ಗುಂಡಿನ ದಾಳಿಯಲ್ಲಿ ದೀಪಕ್ ಸಿಂಗ್ಗೆ ಗುಂಡೇಟು ತಗುಲಿದ್ದು, ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ. ಇನ್ನೊಬ್ಬ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಮುಖ್ಯಮಂತ್ರಿ ಆಗೋಕೆ ಯಾರೂ ಅವಕಾಶ ಕೊಡಲ್ಲ, ನಾವೇ ಗಿಟ್ಟಿಸಿಕೊಳ್ಳಬೇಕು: ಸಿದ್ದರಾಮಯ್ಯ
ಎನ್ಕೌಂಟರ್ ಬಳಿಕ ಆರೋಪಿಯಿಂದ ಎ.30 ಬೋರ್ ಪಿಸ್ತೂಲ್, ಎರಡು ಮ್ಯಾಗಜೀನ್ಗಳು, ಎಂಟು ಜೀವಂತ ಗುಂಡುಗಳು, ಮೊಬೈಲ್ ಫೋನ್ ಹಾಗೂ ಕೃತ್ಯಕ್ಕೆ ಬಳಸಲಾಗಿದೆ ಎನ್ನಲಾದ ಹೋಂಡಾ ಆಕ್ಟಿವಾ ಸ್ಕೂಟರ್ ವಶಪಡಿಸಿಕೊಳ್ಳಲಾಗಿದೆ. ಇದೇ ವೇಳೆ ಪ್ರಕರಣದಲ್ಲಿ ಪಾಕಿಸ್ತಾನ ಮೂಲದ ಉಗ್ರ ಸಂಪರ್ಕವಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ. ತನಿಖೆಯ ವೇಳೆ ಹೊರಬಂದ ಮಾಹಿತಿಯ ಪ್ರಕಾರ, ಪಾಕಿಸ್ತಾನ ಮೂಲದ ಓರ್ವ ಉಗ್ರ ಆರೋಪಿಗಳಿಗೆ ದಾಳಿ ನಡೆಸಲು ಹಣದ ಆಮಿಷ ನೀಡಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ದೆಹಲಿ ಹಾಲಿ, ಮಾಜಿ ಸಿಎಂಗಳಿಗೆ SIR ನೋಟಿಸ್
ತರಣ್ ತಾರಣ್ ಜಿಲ್ಲೆಯ ನಿವಾಸಿಯಾಗಿದ್ದ ಹರ್ಜಿತ್ ಸಿಂಗ್ ಅವರು ಪೊಲೀಸ್ ಕಂಟ್ರೋಲ್ ರೂಮ್ ಕರ್ತವ್ಯದಲ್ಲಿದ್ದರು. ಶುಕ್ರವಾರ ಮಧ್ಯರಾತ್ರಿ ವೇಳೆಗೆ ಭಗ್ತನ್ವಾಲಾ ಧಾನ್ಯ ಮಾರುಕಟ್ಟೆ ಬಳಿ ಬೈಕ್ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಹರ್ಜಿತ್ ಸಿಂಗ್ ಅವರಿಗೆ ಅತ್ಯಂತ ಸಮೀಪದಿಂದ ಗುಂಡು ಹೊಡೆದಿದ್ದರು. ಇದನ್ನೂ ಓದಿ: ಕನ್ನಡಪರ ಹೋರಾಟಗಾರರ ಮೇಲಿನ ಕೇಸ್ ವಾಪಸ್ – ಸಿಎಂ ಡಿಕೆಶಿ
ಪಂಜಾಬ್ ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಅವರು ಶುಕ್ರವಾರ ಬೆಳಗ್ಗೆ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಘಟನೆ ಕುರಿತು ಮಾಹಿತಿ ನೀಡಿದ್ದರು. ಹರ್ಜಿತ್ ಸಿಂಗ್ ಅವರ ಕುತ್ತಿಗೆಯ ಹಿಂಭಾಗಕ್ಕೆ ಸ್ವಲ್ಪ ಕೆಳಭಾಗದಲ್ಲಿ ಹಿಂದಿನಿಂದ ಬಂದ ಒಂದೇ ಒಂದು ಗುಂಡು ತಗುಲಿತ್ತು ಎಂದು ಗೌರವ್ ಯಾದವ್ ತಿಳಿಸಿದ್ದರು. ಇದನ್ನೂ ಓದಿ: ಎಐ ಪಡೆ ರಚಿಸುವ ಯೋಜನೆ ಘೋಷಿಸಿದ ಟ್ರಂಪ್
ಘಟನಾ ಸ್ಥಳದಲ್ಲಿ .30 ಬೋರ್ ಪಿಸ್ತೂಲ್ನ ಖಾಲಿ ಕಾರ್ಟ್ರಿಡ್ಜ್ ಕೂಡ ಪತ್ತೆಯಾಗಿತ್ತು. ಪ್ರಕರಣದ ತನಿಖೆ ಮುಂದುವರಿದಿದ್ದು, ಪರಾರಿಯಾಗಿರುವ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸಲ್ಮಾನ್ ಖಾನ್ಗೆ ಹೃದಯಾಘಾತ ಆಗಿದ್ದು ನಿಜಾನಾ? – ಬಿಗ್ಬಾಸ್ ಪ್ರೋಮೋ ತಂದ ಆತಂಕ!

