ಚಂಡೀಗಢ: ವಾರಿಸ್ ಪಂಜಾಬ್ ದೆ ಮುಖ್ಯಸ್ಥ ಅಮೃತ್ ಪಾಲ್ ಸಿಂಗ್ (Amritpal Singh) ಸೇರಿ ಇತರರು ಪಾಕಿಸ್ತಾನದ ಐಎಸ್‌ಐ (Pakistan ISI) ಜೊತೆಗೆ ಲಿಂಕ್ ಹೊಂದಿರುವ ಶಂಕೆಯಿದೆ ಎಂದು ಪಂಜಾಬ್ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಅಮೃತ್‌ಪಾಲ್ ಸಿಂಗ್‌ನನ್ನ ಬಂಧಿಸುವ ಕಾರ್ಯಾಚರಣೆ 3ನೇ ದಿನಕ್ಕೆ ಕಾಲಿಟ್ಟಿದ್ದು, ಪಂಜಾಬ್ ಐಜಿಪಿ ಸುಖಚೈನ್ ಸಿಂಗ್ ಗಿಲ್, ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಇಂಟರ್ ಸರ್ವೀಸಸ್ ಇಂಟಲಿಜೆನ್ಸ್ (ISI) ಈ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಅನುಮಾನ ವ್ಯಕ್ತಪಡಿಸಿದ್ದಾರೆ.
Advertisement
Advertisement
ಈ ಕುರಿತು ಮಾತನಾಡಿರುವ ಸುಖಚೈನ್ ಸಿಂಗ್ ಗಿಲ್, ಐಎಸ್‌ಐ ಜೊತೆಗಿನ ದೃಷ್ಟಿಕೋನದಿಂದಲೂ ಈ ಪ್ರಕರಣವನ್ನ ತನಿಖೆ ನಡೆಸಲಾಗುತ್ತಿದ್ದು, ಇದುವರೆಗೆ ಕಂಡುಬಂದಿರುವ ಅಂಶಗಳ ಪ್ರಕಾರ ಐಎಸ್‌ಐ ಸಹ ಇದರಲ್ಲಿ ಭಾಗಿಯಾಗಿರುವ ಶಂಕೆಯಿದೆ. ಜೊತೆಗೆ ವಿದೇಶಿ ನಿಧಿ ಬಳಕೆಯಾಗಿರುವ ಬಗ್ಗೆಯೂ ಅನುಮಾನವಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಖಲಿಸ್ತಾನಿ ಹೋರಾಟಗಾರ ಅಮೃತ್‌ಪಾಲ್ ಸಿಂಗ್ ಪರಾರಿ – ಪಂಜಾಬ್ ಹಲವೆಡೆ ಇಂಟರ್‌ನೆಟ್ ಸ್ಥಗಿತ
Advertisement
Advertisement
ಸದ್ಯ ರಾಜ್ಯದಲ್ಲಿ ಪರಿಸ್ಥಿತಿ ಸ್ಥಿರವಾಗಿದೆ. ಶಾಂತಿ, ಸೌಹಾರ್ದತೆಗೆ ಭಂಗ ತರುವ ಪ್ರಯತ್ನ ಮಾಡಿದ್ದ 114 ಜನರನ್ನ ಬಂಧಿಸಲಾಗಿದೆ. ಮೊದಲ ದಿನ 78 ಮಂದಿ, 2ನೇ ದಿನ 34 ಮಂದಿ ಹಾಗೂ 3ನೇ ದಿನ ಇಬ್ಬರನ್ನ ಬಂಧಿಸಿದ್ದು, ಶಸ್ತ್ರಾಸ್ತ್ರಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಖಲಿಸ್ತಾನಿ ನಾಯಕರು ಮಾನವ ಬಾಂಬರ್‌ಗಳನ್ನ ರೂಪಿಸುತ್ತಿದ್ದಾರೆ – ಗುಪ್ತಚರ ಇಲಾಖೆ ಮಾಹಿತಿ
ಗುಪ್ತಚರ ಇಲಾಖೆ ಹೇಳಿದ್ದೇನು?
ಅಮೃತ್‌ಪಾಲ್ ಸಿಂಗ್ ವ್ಯಸನಮುಕ್ತ ಕೇಂದ್ರಗಳು ಮತ್ತು ಗುರುದ್ವಾರದಲ್ಲಿ ಶಸ್ತ್ರಾಸ್ತ್ರಗಳ ಸಂಗ್ರಹ ಮಾಡುತ್ತಿದ್ದಾನೆ. ಅಲ್ಲದೇ ಯುವಕರನ್ನ ಆತ್ಮಾಹುತಿ ದಾಳಿಗೆ ತಯಾರಿಸುತ್ತಿದ್ದಾನೆ ಎಂದು ಗುಪ್ತಚರ ಇಲಾಖೆ ಈಗಾಗಲೇ ಮಾಹಿತಿ ನೀಡಿದೆ. ಈ ಬೆನ್ನಲ್ಲೇ ಭದ್ರತಾ ಪಡೆ ಎಚ್ಚೆತ್ತುಕೊಂಡಿದೆ. ಕಳೆದ ವರ್ಷ ಸಿಂಗ್ ದುಬೈನಿಂದ ಬಂದಿದ್ದ ಪಾಕಿಸ್ತಾನದ ಐಎಸ್‌ಐ ಮತ್ತು ಖಲಿಸ್ತಾನ್ ಪರ ಸಹಾನುಭೂತಿ ಹೊಂದಿರುವ ಅಮೃತ್‌ಪಾಲ್ ಸಿಂಗ್, ಯುವಕರನ್ನ ಮಾನವ ಬಾಂಬರ್‌ಗಳಾಗಲೂ ಮನವೊಲಿಸುವ ಕಾರ್ಯ ಮಾಡುತ್ತಿದ್ದಾನೆ ಎಂದು ಗುಪ್ತಚರ ಇಲಾಖೆ ತಿಳಿಸಿತ್ತು.