ಚಂಡೀಗಢ: ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರು ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರನ್ನು ತಮ್ಮ ವಿರುದ್ಧ ಧುರಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸವಾಲು ಹಾಕಿದ್ದಾರೆ.
Advertisement
ನಾನು ಚಮಕೌರ್ ಸಾಹಿಬ್ (ಚರಂಜಿತ್ ಚನ್ನಿ ಕ್ಷೇತ್ರ) ಕ್ಷೇತ್ರದಿಂದ ಸ್ಪರ್ಧಿಸಲು ಸಾಧ್ಯವಿಲ್ಲ. ಆದರೆ ಅವರು ಧುರಿಯಿಂದ ಸ್ಪರ್ಧಿಸಬಹುದು, ನಾನು ಅವರನ್ನು ಸ್ವಾಗತಿಸುತ್ತೇನೆ ಎಂದು ಭಗವಂತ್ ಮಾನ್ ಹೇಳಿದ್ದಾರೆ. ಭಗವಂತ್ ಮಾನ್ ಅವರು ಪಂಜಾಬ್ ಚುನಾವಣೆಯಲ್ಲಿ ಧುರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಭಗವಂತ್ ಮಾನ್ ಸಂಸದರಾಗಿರುವ ಸಂಗ್ರೂರ್ ಜಿಲ್ಲೆಯಲ್ಲಿ ಈ ಕ್ಷೇತ್ರವಿದೆ. ಇದನ್ನೂ ಓದಿ: ಪ್ರಿಯತಮೆ ಕೈಕೊಟ್ಟಿದ್ದಕ್ಕೆ ಆಕೆಯ ಸಹೋದರನನ್ನೇ ಕಿಡ್ನಾಪ್ ಮಾಡಿದ ಭೂಪ
Advertisement
Advertisement
ಜನವರಿ 18 ರಂದು ಫೋನ್ ಮೂಲಕ ನಡೆಸಿದ ಸಮೀಕ್ಷೆಯಲ್ಲಿ ಶೇಕಡಾ 93 ಕ್ಕಿಂತಲೂ ಹೆಚ್ಚು ಮಂದಿ ಅವರಿಗೆ ಮತ ಚಲಾಯಿಸಿ ಅವರನ್ನು ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಲಾಯಿತು. ಧುರಿ ಕ್ಷೇತ್ರದಲ್ಲಿ ಪ್ರಸ್ತುತ ಕಾಂಗ್ರೆಸ್‍ನ ದಲ್ವೀರ್ ಸಿಂಗ್ ಖಂಗುರಾ ಶಾಸಕರಾಗಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಅರೆಸ್ಟ್