LatestMain PostNational

ಕಾಂಗ್ರೆಸ್ ಸೇರ್ಪಡೆ ನಂತ್ರ ರಾಹುಲ್ ಗಾಂಧಿ ಭೇಟಿಯಾದ ಸಿಧು ಮೂಸೆವಾಲಾ

ಚಂಡೀಗಢ: ಪಂಜಾಬಿ ಜನಪ್ರಿಯ ಗಾಯಕ ಸಿಧು ಮೂಸೆವಾಲಾ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಂತೆಯೇ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಶುಕ್ರವಾರ ಭೇಟಿಯಾದರು.

ಈ ವೇಳೆ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು, ಎಐಸಿಸಿ ಪಂಜಾಬ್ ಉಸ್ತುವಾರಿ ಹರೀಶ್ ಚೌಧರಿ ಮತ್ತು ರಾಜ್ಯ ಸಾರಿಗೆ ಸಚಿವ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಉಪಸ್ಥಿತರಿದ್ದರು.

ನವಜೋತ್ ಸಿಂಗ್ ಸಿಧು ಅವರು ರಾಹುಲ್ ಗಾಂಧಿ ಅವರೊಂದಿಗೆ ಕ್ಲಿಕ್ಕಿಸಿಕೊಂಡಿರುವ ಫೋಟೋವನ್ನು ತಮ್ಮ ಟ್ವಿಟ್ಟರ್‌ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಅಣ್ಣನ ತೋಳಿನಲ್ಲಿ ಸಹೋದರರು ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮಧ್ಯಾಹ್ನ ನಿದ್ದೆ ಮಾಡುವ ಸೊಸೆಗೆ ಗೂಸಾ ಕೊಟ್ಟ ಅತ್ತೆ, ಮಾವ

ಗುರುವಾರ ಸಿಧು ಮೂಸೆವಾಲಾ ಅವರು ಚಂಡೀಗಢದಲ್ಲಿ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಮತ್ತು ನವಜೋತ್ ಸಿಂಗ್ ಸಿಧು ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು. ಸಿಧು ಮೂಸೆವಾಲಾ ಅವರು ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎನ್ನಲಾಗುತ್ತಿದೆ. ಇದನ್ನೂ ಓದಿ: ಉದ್ಘಾಟನೆ ವೇಳೆ ಒಡೆದ ತೆಂಗಿನಕಾಯಿಂದ ಬಿರುಕು ಬಿಟ್ಟ 1.16ಕೋಟಿ ರೂ. ವೆಚ್ಚದ ರಸ್ತೆ!

ಚರಂಜಿತ್ ಸಿಂಗ್ ಚನ್ನಿ ಅವರು ಕೂಡ ತಮ್ಮ ಟ್ವಿಟ್ಟರ್‌ನಲ್ಲಿ ಪ್ರತಿಭಾವಂತ ಸಿಧು ಮೂಸೆವಾಲಾ ಅವರನ್ನು ಕಾಂಗ್ರೆಸ್ ಕುಟುಂಬಕ್ಕೆ ಸ್ವಾಗತಿಸುತ್ತೇನೆ. ಅವರು ತಮ್ಮ ಸಾಮರ್ಥ್ಯದಷ್ಟು ಜನರಿಗೆ ಸೇವೆ ಸಲ್ಲಿಸುತ್ತಾರೆ ಮತ್ತು ಕಾಂಗ್ರೆಸ್ ಬಗ್ಗೆ ಸಂದೇಶವನ್ನು ಸಾರುತ್ತಾರೆ ಎಂಬ ನಂಬಿಕೆ ನನಗಿದೆ ಎಂದು ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published.

Back to top button