ನೇರಳೆ ಮಾರ್ಗ ಮೆಟ್ರೋ ಸಂಚಾರದಲ್ಲಿಂದು ವ್ಯತ್ಯಯ

Public TV
1 Min Read
Namma Metro

ಬೆಂಗಳೂರು: ಮೆಟ್ರೋ ನಿಲ್ದಾಣಗಳ ಕಾಮಗಾರಿ ಹಿನ್ನೆಲೆಯಲ್ಲಿ ಇಂದು ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದೆ.

metro

ಇಂದು ರಾತ್ರಿ ಬೈಯಪ್ಪನಹಳ್ಳಿ ಟು ಎಂಜಿ ರಸ್ತೆವರೆಗಿನ ನೇರಳೆ ಮಾರ್ಗದ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಕೆಂಗೇರಿ ಟು ಬೈಯಪ್ಪನಹಳ್ಳಿ ಮೆಟ್ರೋ ಸೇವೆ ರಾತ್ರಿ 8.40ಕ್ಕೆ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಕಡೆಗೆ ರಾತ್ರಿ 9.10ಕ್ಕೆ ಕೊನೆಗೊಳ್ಳಲಿದೆ. ಇದನ್ನೂ ಓದಿ: ಪುತ್ರನಿಗೆ ಕೈ ತಪ್ಪಿದ ಟಿಕೆಟ್‌ – ಮೌನಕ್ಕೆ ಜಾರಿದ ಯಡಿಯೂರಪ್ಪ

namma metro 1

ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ಎಂ.ಜಿ.ರಸ್ತೆಗೆ ಎಂದಿನಂತೆ ಸೇವೆ ಇರಲಿದೆ. ಹಸಿರು ಬಣ್ಣದ ಮಾರ್ಗದಲ್ಲಿ ಯಾವುದೇ ಬದಲಾವಣೆ ಇಲ್ಲ. ಭಾನುವಾರದಂದು ನೇರಳೆ ಮಾರ್ಗದಲ್ಲಿ ಬೆಳಗ್ಗೆ 7.00 ಗಂಟೆಯಿಂದ ಮೆಟ್ರೋ ಸೇವೆ ಪುನರಾರಂಭಿಸಲಾಗುತ್ತದೆ.

Share This Article
Leave a Comment

Leave a Reply

Your email address will not be published. Required fields are marked *