ಬೆಂಗಳೂರು: ಪ್ರಯಾಣಿಕರೊಬ್ಬರ ಮೆಟಲ್ ಚೈನ್ ಮೆಟ್ರೋ ಡೋರ್ ಗೈಡ್‌ವೇಯಲ್ಲಿ ಸಿಲುಕಿದ್ದರಿಂದ ನಿನ್ನೆ ಮೆಟ್ರೋ ಬಾಗಿಲು ಮುಚ್ಚದೇ ಎಡವಟ್ಟು ಆಯ್ತು ಎಂದು ಮೆಟ್ರೋ ಸ್ಪಷ್ಟಪಡಿಸಿದೆ.
ಕಬ್ಬನ್ ಪಾರ್ಕ್ ಮೆಟ್ರೋ ಬಾಗಿಲು ಮುಚ್ಚದ ಬಗ್ಗೆ ಮೆಟ್ರೋ ಪ್ರಾಥಮಿಕ ತನಿಖಾ ವರದಿ ರಿವೀಲ್ ಆಗಿದೆ. ರೈಲಿನ ಉಪಕರಣದಲ್ಲಿ ಸಮಸ್ಯೆಯಾಗಿಲ್ಲ ಎಂದು ಮೆಟ್ರೋ ಸ್ಪಷ್ಟನೆ ನೀಡಿದೆ. ಇದನ್ನೂ ಓದಿ: 72,186 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಅಸ್ತು – 6 ತಿಂಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚನೆ
ಮೆಟ್ರೋ ಸ್ಪಷ್ಟನೆ ಏನು?
ನಿನ್ನೆ ನೇರಳೆ ಮಾರ್ಗದ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಸಂಭವಿಸಿದ ರೈಲಿನ ಬಾಗಿಲು ಸರಿಯಾಗಿ ಮುಚ್ಚದ ಘಟನೆ ಹಿನ್ನೆಲೆಯಲ್ಲಿ ಸಂಜೆ 7:36 ರಿಂದ 7:54 ಗಂಟೆಯವರೆಗೆ ಮೆಟ್ರೋ ಸೇವೆಯಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಿತ್ತು. ಈ ಘಟನೆಯ ಕುರಿತು ನಡೆಸಲಾದ ಪ್ರಾಥಮಿಕ ತನಿಖೆಯಲ್ಲಿ ಘಟನೆಯ ಕಾರಣ ಪತ್ತೆಯಾಗಿದೆ.
ಕಾರ್ಯಾಚರಣೆ ಮತ್ತು ನಿರ್ವಹಣಾ ತಂಡಗಳು ನಡೆಸಿದ ತನಿಖೆಯಲ್ಲಿ, ಪ್ರಯಾಣಿಕರೊಬ್ಬರ ಲೋಹದ ಸರ Metal Chain) ರೈಲಿನ ಬಾಗಿಲಿನ ಡೋರ್ ಗೈಡ್‌ವೇ (Door Guideway) ಯಲ್ಲಿ ಸಿಲುಕಿಕೊಂಡಿದ್ದರಿಂದ ಬಾಗಿಲುಗಳು ಸರಿಯಾಗಿ ಮುಚ್ಚಲು ಸಾಧ್ಯವಾಗದ ಪರಿಣಾಮವಾಗಿ ಕಾರ್ಯಾಚರಣೆಯಲ್ಲಿ ತಾತ್ಕಾಲಿಕ ವಿಳಂಬ ಉಂಟಾಗಿತ್ತು. ಇದನ್ನೂ ಓದಿ: ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧ, MSME ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಭರವಸೆ: ಯತೀಂದ್ರ ಸಿದ್ದರಾಮಯ್ಯ
ರೈಲು ಹಾಗೂ ಅದರ ಬಾಗಿಲಿನ ವ್ಯವಸ್ಥೆಯ ಸಮಗ್ರ ತಾಂತ್ರಿಕ ಪರಿಶೀಲನೆಯ ನಂತರ, ರೈಲಿನ ಉಪಕರಣಗಳಲ್ಲಿ ಯಾವುದೇ ತಾಂತ್ರಿಕ ದೋಷ ಕಂಡುಬಂದಿಲ್ಲ ಎಂಬುದು ದೃಢಪಟ್ಟಿದೆ. ಪ್ರಯಾಣಿಕರ ಸುರಕ್ಷತೆಯೇ ನಮ್ಮ ಅತ್ಯುನ್ನತ ಆದ್ಯತೆಯಾಗಿದೆ. ಸುರಕ್ಷಿತ, ವಿಶ್ವಾಸಾರ್ಹ ಹಾಗೂ ನಿರಂತರ ಮೆಟ್ರೋ ಸೇವೆಗಳನ್ನು ಒದಗಿಸುವುದು ನಮ್ಮ ಬದ್ಧತೆಯಾಗಿದೆ ಎಂದು ಬಿಎಂಆರ್‌ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.
