ಹೈದರಾಬಾದ್: ಸಂಧ್ಯಾ ಥಿಯೇಟರ್ ದುರಂತ ಪ್ರಕರಣಕ್ಕೆ (Sandhya Theatre Stampede Case) ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ನಟ ಅಲ್ಲು ಅರ್ಜುನ್ (Allu Arjun) ಅವರು ಜೈಲಿಗೆ ಶಿಫ್ಟ್ ಆಗಲಿದ್ದಾರೆ.
ಬಂಧನಕ್ಕೆ ಒಳಗಾದ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ನಾಂಪಲ್ಲಿ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ಕೋರ್ಟ್ ಆದೇಶದ ಬೆನ್ನಲ್ಲೇ ಅಲ್ಲು ಅರ್ಜುನ್ ಅವರನ್ನು ಚಂಚಲಗೂಡ ಜೈಲಿಗೆ ಶಿಫ್ಟ್ ಮಾಡಲಾಗುತ್ತದೆ. ಇದನ್ನೂ ಓದಿ: It’s Too Much, ಬೆಡ್ ರೂಮ್‌ವರೆಗೆ ಬಂದಿದ್ದು ಸರಿಯಲ್ಲ – ಪೊಲೀಸರ ವಿರುದ್ಧ ಅಲ್ಲು ಅರ್ಜುನ್ ಗರಂ
Advertisement
Advertisement
Advertisement
ಡಿ. 4 ರಂದು ‘ಪುಷ್ಪ 2’ ಸಿನಿಮಾ (Pushpa 2) ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒರ್ವ ಮಹಿಳೆ ನಿಧನ ಹೊಂದಿದ್ದರು. ಅವರ ಪುತ್ರ ಗಂಭೀರವಾಗಿ ಗಾಯಗೊಂಡಿದ್ದರು. ಈ ಘಟನೆ ಕುರಿತಂತೆ ನಟ ಅಲ್ಲು ಅರ್ಜುನ್ ಹಾಗೂ ಇನ್ನೂ ಇತರರ ವಿರುದ್ಧ ದೂರು ದಾಖಲಾಗಿತ್ತು. ಇದನ್ನೂ ಓದಿ: ನಟ ದರ್ಶನ್‌ಗೆ ಬಿಗ್ ರಿಲೀಫ್; 7 ತಿಂಗಳ ಬಳಿಕ ಜಾಮೀನು ಮಂಜೂರು
Advertisement
ಪ್ರಕರಣ ಕುರಿತು ಈ ಮೊದಲೇ ಹೈದರಾಬಾದ್, ಚಿಕ್ಕಡಪಲ್ಲಿ ಪೊಲೀಸರು ನೊಟೀಸ್ ನೀಡಿದ್ದರು. ಈ ನೋಟಿಸಿಗೆ ಅಲ್ಲು ಅರ್ಜುನ್ ಉತ್ತರ ನೀಡಿರಲಿಲ್ಲ ಎನ್ನಲಾಗಿದೆ. ಆದರೆ ಅಲ್ಲು ಅರ್ಜುನ್ ಈ ಪ್ರಕರಣವನ್ನು ರದ್ದು ಮಾಡುವಂತೆ ತೆಲಂಗಾಣ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.