ಜ.3 ಕ್ಕೆ ನಟ ಅಲ್ಲು ಅರ್ಜುನ್ ಜಾಮೀನು ತೀರ್ಪು

Public TV
1 Min Read
allu arjun 8

ಹೈದರಾಬಾದ್‌:  ಪುಷ್ಪ 2 ಚಿತ್ರ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಸಲ್ಲಿಸಿರುವ ಸಾಮಾನ್ಯ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನಾಂಪಲ್ಲಿ ಜಿಲ್ಲಾ ನ್ಯಾಯಾಲಯದಲ್ಲಿ ಜನವರಿ 3 ರಂದು ತೀರ್ಪು ನೀಡುವುದಾಗಿ ಹೇಳಿದೆ.

ಪ್ರಕರಣದ ವಿಚಾರಣೆ ವೇಳೆ ಅಲ್ಲು ಅರ್ಜುನ್ ಅವರ ಸಾಮಾನ್ಯ ಜಾಮೀನು ಅರ್ಜಿಯನ್ನು ವಿರೋಧಿಸಿ ಚಿಕ್ಕಡಪಲ್ಲಿ ಪೊಲೀಸರು ಪ್ರತಿ-ಅಫಿಡವಿಟ್ ಸಲ್ಲಿಸಿದ್ದಾರೆ. ನಟ ಅಲ್ಲು ಅರ್ಜುನ್ ಗೆ ಸಾಮಾನ್ಯ ಜಾಮೀನು ನೀಡುವಂತೆ ಅವರ ಹಿರಿಯ ವಕೀಲ ನಿರಂಜನ್ ರೆಡ್ಡಿ ವಾದ ಮಂಡಿಸಿದರು. ಇದೇ ವೇಳೆ ಪಬ್ಲಿಕ್ ಪ್ರಾಸಿಕ್ಯೂಟರ್‌ ಜಾಮೀನು ಅರ್ಜಿಯನ್ನು ವಜಾಗೊಳಿಸುವಂತೆ ಮನವಿ ಮಾಡಿದರು.allu arjun 7

ಬಾರಿ ಚರ್ಚೆಗೆ ಕಾರಣವಾದ ಪ್ರಕರಣದ ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಜನವರಿ 3 ರಂದು ಈ ಪ್ರಕರಣದ ಬಗ್ಗೆ ತೀರ್ಪು ನೀಡುವುದಾಗಿ ಘೋಷಿಸಿತು. ಅಲ್ಲು ಅರ್ಜುನ್‌ಗೆ ಈಗಾಗಲೇ ಹೈಕೋರ್ಟ್ ನಾಲ್ಕು ವಾರಗಳ ಮಧ್ಯಂತರ ಜಾಮೀನು ನೀಡಿದ್ದು, ಇದೀಗ ಸಾಮಾನ್ಯ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

Share This Article