‘ಪುಷ್ಪ 2′ ಬೆಡಗಿ (Pushpa 2) ರಶ್ಮಿಕಾ ಮಂದಣ್ಣ (Rashmika Mandanna) ಮಾದಕ ಲುಕ್‌ನಲ್ಲಿ ಮಿಂಚಿದ್ದಾರೆ. ಹೊಸ ಫೋಟೋಶೂಟ್ ಅನ್ನು ನಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಶ್ರೀವಲ್ಲಿ ಬ್ಯೂಟಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಇದನ್ನೂ ಓದಿ:ಆ್ಯಕ್ಷನ್ ಸೀನ್ ಶೂಟಿಂಗ್ ವೇಳೆ ರಾಶಿ ಖನ್ನಾಗೆ ಗಾಯ- ಪೋಸ್ಟ್ ಹಂಚಿಕೊಂಡ ನಟಿ
ನ್ಯಾಷನಲ್ ಕ್ರಶ್ ರಶ್ಮಿಕಾ ಮಾದಕ ಲುಕ್‌ನಿಂದ ಇದೀಗ ಇಂಟರ್‌ನೆಟ್‌ಗೆ ಬೆಂಕಿ ಹಚ್ಚಿದ್ದಾರೆ. ಬ್ಲ್ಯಾಕ್ ಡ್ರೆಸ್‌ನಲ್ಲಿ ಶ್ರೀವಲ್ಲಿ ಮಸ್ತ್ ಆಗಿ ಪೋಸ್ ನೀಡಿದ್ದಾರೆ. ಅವರ ಈ ಲುಕ್ ಪಡ್ಡೆಹುಡುಗರ ನಿದ್ದೆಗೆಡಿಸಿದೆ. ರಶ್ಮಿಕಾ ಪೋಸ್ಟ್‌ಗೆ ಹಾಟ್, ಸೆಕ್ಸಿ, ಬ್ಯೂಟಿ ಎಂದೆಲ್ಲಾ ಬಗೆ ಬಗೆಯ ಕಾಮೆಂಟ್‌ಗಳನ್ನು ಹಾಕಿದ್ದಾರೆ. ಇದನ್ನೂ ಓದಿ:ಕಾನ್ 2025: ಕತ್ತಲ್ಲಿ ಮೋದಿ ಚಿತ್ರವಿರುವ ನೆಕ್ಲೆಸ್ ಧರಿಸಿ ನಟಿ ಗುಜ್ಜರ್ ವಾಕ್!
ರಶ್ಮಿಕಾ ಅವರು ಅವಾರ್ಡ್ ಕಾರ್ಯಕ್ರಮವೊಂದಕ್ಕೆ ಹಾಜರಿ ಹಾಕಿದ್ದರು. ಫಂಕ್ಷನ್ ತೆರಳುವ ಒಂದಿಷ್ಟು ಫೋಟೋಗಳನ್ನು ಕ್ಲಿಕ್ಕಿಸಿದ್ದರು. ಅದಷ್ಟೇ ಅಲ್ಲ, ಅವರು ಧರಿಸಿರುವ ಈ ಉಡುಗೆಗೆ ಪ್ರಶಂಸೆ ವ್ಯಕ್ತವಾಗಿದ್ದು, ಅದರ ಹಿಂದೆ ಹಲವರ ಶ್ರಮವಿದೆ. ಹಾಗಾಗಿ ಅವರ ಬಟ್ಟೆ ಡಿಸೈನ್ ಮಾಡಿದವರಿಗೆ, ಮೇಕಪ್ ಮಾಡುವರಿಗೆ ನಟಿ ಧನ್ಯವಾದ ಹೇಳಿದ್ದಾರೆ.
ಒಟ್ನಲ್ಲಿ ರಶ್ಮಿಕಾ ಈ ಲುಕ್ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿದೆ. ನಟಿ ಈ ಫೋಟೋಗಳನ್ನು ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಭರ್ಜರಿ ಲೈಕ್ಸ್ ಗಿಟ್ಟಿಸಿಕೊಂಡಿದೆ.
ಕನ್ನಡದ ‘ಕಿರಿಕ್ ಪಾರ್ಟಿ’ (Kirik Party) ಚಿತ್ರದ ಮೂಲಕ ಪರಿಚಿತರಾದ ರಶ್ಮಿಕಾ ಮಂದಣ್ಣ ಅವರು ಇದೀಗ ಸೌತ್ ಮತ್ತು ಬಾಲಿವುಡ್‌ನಲ್ಲಿ ಬೇಡಿಕೆಯ ನಟಿಯಾಗಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಅವರು ತೊಡಗಿಸಿಕೊಂಡಿದ್ದಾರೆ.