ಆನಂದ್ ದೇವರಕೊಂಡ ಮತ್ತು ವೈಷ್ಣವಿ ಚೈತನ್ಯ (Vaishnavi Chaitanya) ಮತ್ತೆ ಹೊಸ ಸಿನಿಮಾಗಾಗಿ ಒಂದಾಗಿದ್ದಾರೆ. ‘ಬೇಬಿ’ (Baby) ಜೋಡಿಯ ಹೊಸ ಚಿತ್ರಕ್ಕೆ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಕ್ಲ್ಯಾಪ್ ಮಾಡುವ ಮೂಲಕ ತಂಡಕ್ಕೆ ಶುಭಕೋರಿದ್ದಾರೆ. ಇದನ್ನೂ ಓದಿ:ರೆಡ್ಡಿ ಮಗನ ಸಿನಿಮಾದಲ್ಲಿ ಶ್ರೀಲೀಲಾ- 3 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ನಟಿ

View this post on Instagram
2023ರಲ್ಲಿ ತೆರೆಕಂಡ ‘ಬೇಬಿ’ ಸಿನಿಮಾ ಸೂಪರ್ ಸಕ್ಸಸ್ ಕಂಡಿತ್ತು. ಮತ್ತೆ ಅದೇ ಜೋಡಿ ಜೊತೆಯಾಗಿರೋದು ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ. ಈ ಸಿನಿಮಾವನ್ನು ಆದಿತ್ಯ ಹಾಸನ್ ನಿರ್ದೇಶನ ಮಾಡಿದ್ದಾರೆ. ಸಿತಾರಾ ಸಂಸ್ಥೆ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ.
‘ಬೇಬಿ’ ಚಿತ್ರದ ಮೂಲಕ ತ್ರಿಕೋನ ಪ್ರೇಮಕಥೆ ತೋರಿಸಿದ್ದರು. ಆನಂದ್ ದೇವರಕೊಂಡ ಮತ್ತು ವೈಷ್ಣವಿ ಹೊಸ ಸಿನಿಮಾ ಯಾವ ಜಾನರ್ ಕಥೆ ಹೇಳಲು ಹೊರಟಿದ್ದಾರೆ ಎಂಬುದನ್ನು ನೋಡಲು ಫ್ಯಾನ್ಸ್ ಕ್ಯೂರಿಯಸ್ ಆಗಿದ್ದಾರೆ.

