‘ಆಪರೇಷನ್ ಸಿಂಧೂರ’ (Operation Sindoor) ಕಾರ್ಯಾಚರಣೆಯ ಬಗ್ಗೆ ಸುದೀಪ್, ಜಗ್ಗೇಶ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಪ್ರತಿಕ್ರಿಯೆ ನೀಡಿದ್ದಾರೆ. ಈ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಕೂಡ ರಿಯಾಕ್ಟ್ ಮಾಡಿದ್ದಾರೆ. ಪ್ರಾಣವನ್ನೇ ಪಣಕ್ಕಿಟ್ಟು ರಕ್ಷಿಸುವ ನಮ್ಮ ಸೈನಿಕರಿಗೆ ಥ್ಯಾಂಕ್ಯೂ ಎಂದು ನಟಿ ಹೇಳಿದ್ದಾರೆ. ಇದನ್ನೂ ಓದಿ:ರಾಮ್ ಚರಣ್ ಸಿನಿಮಾದಲ್ಲಿ ‘ಕಿಸ್ಸಿಕ್’ ಬೆಡಗಿ ಐಟಂ ಡ್ಯಾನ್ಸ್?
ಈಗಾಗಲೇ ಸಾಕಷ್ಟು ನೋವನ್ನು ನಮ್ಮ ಜನರು ಅನುಭವಿಸಿದ್ದಾರೆ. ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ನಮ್ಮನ್ನು ರಕ್ಷಿಸುವ ಎಲ್ಲಾ ಸೈನಿಕರಿಗೆ ಥ್ಯಾಂಕ್ಯೂ. ಜೈ ಹಿಂದ್, ಆಪರೇಷನ್ ಸಿಂಧೂರ ಎಂದು ರಶ್ಮಿಕಾ ಮಂದಣ್ಣ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ನಿರ್ಮಾಪಕನೊಂದಿಗೆ ಸಮಂತಾ ಲವ್‌ನಲ್ಲಿ ಬಿದ್ದಿರೋದು ನಿಜನಾ? – ಫ್ಯಾನ್ಸ್‌ಗೆ ಸಿಕ್ತು ಸಾಕ್ಷಿ
ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ 26 ಮಂದಿ ಬಲಿಯಾಗಿದ್ದರು. ಅದಕ್ಕೆ ಪ್ರತೀಕಾರವಾಗಿ ನಿನ್ನೆ ತಡರಾತ್ರಿ ಭಾರತೀಯ ವೀರ ಯೋಧರು ಉಗ್ರರ 9 ಅಡಗುತಾಣಗಳ ಮೇಲೆ ದಾಳಿ ನಡೆಸುವ ಮೂಲಕ ಪಹಲ್ಗಾಮ್‌ನಲ್ಲಿ ನಡೆದ ನರಮೇಧಕ್ಕೆ ತಕ್ಕ ಪಾಠ ಕಲಿಸಿದ್ದಾರೆ. ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯಲ್ಲಿ 100ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿರಬಹುದು ಎಂದು ಅಂದಾಜಿಸಲಾಗಿದೆ.