ಕನ್ನಡದ ನಟಿ ಶ್ರೀಲೀಲಾ (Sreeleela) ತೆಲುಗು, ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಹೀಗಿರುವಾಗ 3 ವರ್ಷಗಳ ಬಳಿಕ ಮತ್ತೆ ಕನ್ನಡ ಸಿನಿಮಾದಲ್ಲಿ ಮಿಂಚಲು ರೆಡಿಯಾಗಿದ್ದಾರೆ. ಜನಾರ್ದನ ರೆಡ್ಡಿ ಪುತ್ರ ಕಿರೀಟಿಗೆ ನಾಯಕಿಯಾಗಿ ಮತ್ತೆ ಸ್ಯಾಂಡಲ್‌ವುಡ್‌ನಲ್ಲಿ ದರ್ಶನ ಕೊಡಲು ಸಜ್ಜಾಗಿದ್ದಾರೆ. ಇದನ್ನೂ ಓದಿ:ರಣವೀರ್ ಸಿಂಗ್ ನಟನೆಯ ‘ಡಾನ್ 3’ ಸಿನಿಮಾ ಶುರುವಾಗೋದು ಯಾವಾಗ?- ಸಿಕ್ತು ಅಪ್‌ಡೇಟ್



‘ಮಾಯಾಬಜಾರ್’ ಸಿನಿಮಾ ಖ್ಯಾತಿಯ ರಾಧಾಕೃಷ್ಣ ರೆಡ್ಡಿ ನಿರ್ದೇಶನದಲ್ಲಿ ‘ಜೂನಿಯರ್’ ಸಿನಿಮಾ ತಯಾರಾಗಿದೆ. ದಕ್ಷಿಣ ಭಾರತದ ಖ್ಯಾತ ನಿರ್ಮಾಣ ಸಂಸ್ಥೆ ವಾರಾಹಿ ಫಿಲ್ಮಂ ಪ್ರೊಡಕ್ಷನ್ ಕಿರೀಟಿ ಮೊದಲ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಬಿಗ್ ಬಜೆಟ್‌ನಲ್ಲಿ ಸಿನಿಮಾ ನಿರ್ಮಾಣ ಚಿತ್ರ ಮೂಡಿ ಬಂದಿದೆ. ಬಹುದೊಡ್ಡ ಹಾಗೂ ಸ್ಟಾರ್ ತಾರಾಗಣ ಈ ಸಿನಿಮಾದ ಮತ್ತೊಂದು ಹೈಲೈಟ್.
ಕಿರೀಟಿ ಜೊತೆ ರವಿಚಂದ್ರನ್, ಜೆನಿಲಿಯಾ ರಿತೇಶ್ ದೇಶ್‌ಮುಖ್, ಶ್ರೀಲೀಲಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ‘ಜೂನಿಯರ್’ ಸಿನಿಮಾದ ತಾಂತ್ರಿಕ ಬಳಗ ಶ್ರೀಮಂತಿಕೆಯಿಂದ ಕೂಡಿದೆ. ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ರಾಕ್ ಸ್ಟಾರ್ ಖ್ಯಾತಿಯ ದೇವಿಶ್ರೀ ಪ್ರಸಾದ್ ಸಂಗೀತ, ‘ಬಾಹುಬಲಿ’ ಸಿನಿಮಾ ಖ್ಯಾತಿಯ ಕಣ್ಣು ಕೆ ಸೆಂಥಿಲ್ ಕುಮಾರ್ ಕ್ಯಾಮೆರಾ ನಿರ್ದೇಶನ, ಭಾರತೀಯ ಚಿತ್ರರಂಗದ ಖ್ಯಾತ ಸಾಹಸ ನಿರ್ದೇಶಕ ಪೀಟರ್ ಹೆನ್ ಸಾಹಸ ಚಿತ್ರಕ್ಕಿದೆ.

