ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಇಂದು ಹುಟ್ಟು ಹಬ್ಬವನ್ನು (Birthday) ಆಚರಿಸಿಕೊಳ್ಳುತ್ತಿದ್ದಾರೆ. ನಿನ್ನೆಯಷ್ಟೇ ಕಾಮನ್ ಡಿಪಿಯನ್ನು ರಿಲೀಸ್ ಮಾಡಿ ಶುಭ ಹಾರೈಸಿದ್ದರು ನಟಿ ಕೀರ್ತಿ ಸುರೇಶ್. ಇಂದು ಪುಷ್ಪಾ 2 ಚಿತ್ರತಂಡದಿಂದ ಉಡುಗೊರೆಯೊಂದು ಸಿಕ್ಕಿದೆ. ಈ ಹುಟ್ಟು ಹಬ್ಬಕ್ಕಾಗಿ ಪುಷ್ಪಾ 2 ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿ ವಿಶ್ ಮಾಡಿದೆ.
ಪುಷ್ಪಾ 2 ಸಿನಿಮಾದಲ್ಲಿ ರಶ್ಮಿಕಾ ಯಾವ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಕುತೂಹಲವಿತ್ತು. ಅದಕ್ಕೀಗ ತೆರೆ ಬಿದ್ದಿದೆ. ಅಭಿಮಾನಿಗಳು ಈ ಲುಕ್ ಗೆ ಫಿದಾ ಆಗಿದ್ದು, ಶುಭಾಶಯಗಳ ಸುರಿಮಳೆಗೈದಿದ್ದಾರೆ. ರಶ್ಮಿಕಾ ಕೂಡ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಅಲ್ಲದೇ, ಪುಷ್ಪಾ 2 ತಂಡಕ್ಕೆ ವಿಶೇಷವಾದ ಕೃತಜ್ಞತೆಯನ್ನೂ ಅವರು ಸಲ್ಲಿಸಿದ್ದಾರೆ. ಇದನ್ನೂ ಓದಿ: ಕಿಸ್ಸಿಂಗ್ ಪ್ರಕರಣ: 16 ವರ್ಷಗಳ ನಂತರ ಶಿಲ್ಪಾ ಶೆಟ್ಟಿಗೆ ಬಿಗ್ ರಿಲೀಫ್
ಪರಭಾಷೆಗಳಲ್ಲಿ ನಾನಾ ತರಹದ ಪಾತ್ರಗಳ ಮೂಲಕ ಮನಗೆದ್ದಿರುವ ನಟಿ ರಶ್ಮಿಕಾ, ಇದೀಗ ಮೊದಲ ಬಾರಿಗೆ Female Lead ಚಿತ್ರದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಕನ್ನಡದ ‘ಕಿರಿಕ್ ಪಾರ್ಟಿ’ (Kirik Party) ಚಿತ್ರದ ಮೂಲಕ ಸಿನಿ ಕೆರಿಯರ್ ಶುರು ಮಾಡಿದ ನಟಿ ರಶ್ಮಿಕಾ, ಸೌತ್- ಬಾಲಿವುಡ್‌ನಲ್ಲಿ ಸೆಟಲ್ ಆಗಿದ್ದಾರೆ. ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗಿ ಶೈನ್ ಆಗ್ತಿದ್ದಾರೆ. ಈವರೆಗೂ 18 ಸಿನಿಮಾಗಳಲ್ಲಿ ನಟಿಸಿರುವ ಪುಷ್ಪ ನಟಿ, ಇದೀಗ ಹೊಸ ಹೆಜ್ಜೆ ಇಡಲು ನಿರ್ಧರಿಸಿದ್ದಾರೆ.
ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ನಟಿಸಬೇಕು ಎಂಬುದು ಪ್ರತಿ ನಟಿಯ ಕನಸಾಗಿರುತ್ತದೆ. ಮಹಿಳಾ ಪ್ರಧಾನ ಚಿತ್ರಗಳಲ್ಲಿ ನಟಿಸಿ ಗೆದ್ದವರು ತೀರಾ ಕಡಿಮೆ ನಾಯಕಿಯರು. ನಯನತಾರಾ, ಅನುಷ್ಕಾ ಶೆಟ್ಟಿ, ಸಮಂತಾ (Samantha), ಇವರೆಲ್ಲರೂ ಫೀಮೇಲ್ ಓರಿಯೆಂಟೆಡ್ ಚಿತ್ರಗಳಲ್ಲಿ ನಟಿಸಿ ಜಯ ಸಾಧಿಸಿದ್ದಾರೆ. ಇದೀಗ ಈ ಹಾದಿಯಲ್ಲಿ ರಶ್ಮಿಕಾ ಮಂದಣ್ಣ ಹೆಜ್ಜೆ ಇಟ್ಟಿದ್ದಾರೆ.
ಈಗಾಗಲೇ ಮಹಿಳಾ ಪ್ರಧಾನ ಚಿತ್ರದ ಕಥೆ ಕೇಳಿ ರಶ್ಮಿಕಾ ಓಕೆ ಎಂದಿದ್ದಾರೆ. ಮೊದಲ ಬಾರಿಗೆ ಸ್ತ್ರೀ ಪ್ರಧಾನ ಚಿತ್ರದಲ್ಲಿ ನಟಿಸುತ್ತಿರುವ ಕಾರಣ, ಅದಕ್ಕಾಗಿ ನಟಿ ಸಕಲ ತಯಾರಿ ಮಾಡ್ತಿದ್ದಾರೆ. ಪ್ರತಿಷ್ಟಿತ ನಿರ್ಮಾಣ ಸಂಸ್ಥೆ ರಶ್ಮಿಕಾ, ಹೊಸ ಸಿನಿಮಾವನ್ನ ನಿರ್ಮಾಣ ಮಾಡ್ತಿದೆ.