– ಜನರನ್ನು ನಿಯಂತ್ರಿಸಲು ಪೊಲೀಸರಿಂದ ಲಾಠಿ ಚಾರ್ಜ್
ಹೈದರಾಬಾದ್: ಸ್ಟರ್ ನಟ ಅಲ್ಲು ಅರ್ಜುನ್ ಅಭಿನಯದ ಪುಷ್ಪ 2 ಪ್ರೀಮಿಯರ್ ಶೋ (Pushpa 2) ವೇಳೆ ಕಾಲ್ತುಳಿತ ಸಂಭವಿಸಿ ಓರ್ವ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ.
Advertisement
ಹೈದರಾಬಾದ್‌ನ RTC ಕ್ರಾಸ್‌ರೋಡ್ಸ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಈ ದುರಂತ ಸಂಭವಿಸಿತು. ದಿಲ್‌ಸುಖ್‌ನಗರದ ರೇವತಿ ಮೃತ ಮಹಿಳೆ. ಪತಿ ಭಾಸ್ಕರ್ ಮತ್ತು ಇಬ್ಬರು ಮಕ್ಕಳೊಂದಿಗೆ ಕಾರ್ಯಕ್ರಮಕ್ಕೆ ಬಂದಿದ್ದರು. ಇದನ್ನೂ ಓದಿ: ವೈವಾಹಿಕ ಜೀವನಕ್ಕೆ ಕಾಲಿಟ್ಟ ನಾಗಚೈತನ್ಯ, ಶೋಭಿತಾ – ನಾಗಾರ್ಜುನ ಭಾವುಕ
Advertisement
Advertisement
ರಾತ್ರಿ 10:30 ರ ಸುಮಾರಿಗೆ ಥಿಯೇಟರ್‌ನಲ್ಲಿ ಪ್ರೇಕ್ಷಕರು ಕಿಕ್ಕಿರಿದು ನೆರೆದಿದ್ದರು. ಸಿನಿಮಾ ಸ್ಕ್ರೀನಿಂಗ್‌ನಲ್ಲಿ ಅಲ್ಲು ಅರ್ಜುನ್ ಹಾಜರಿದ್ದರು. ಈ ವೇಳೆ ನೂಕುನುಗ್ಗಲು ಜಾಸ್ತಿಯಾಗಿ ಕಾಲ್ತುಳಿತ ಸಂಭವಿಸಿತು. ಪರಿಣಾಮವಾಗಿ 39 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಆಕೆಯ ಚಿಕ್ಕ ಮಗನ ಸ್ಥಿತಿ ಗಂಭೀರವಾಗಿದೆ.
Advertisement
ಜನರ ಗುಂಪನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದ್ದು, ಬಾಲಕನ ಸ್ಥಿತಿ ಗಂಭೀರವಾಗಿದೆ. ಇದನ್ನೂ ಓದಿ: ಶ್ರೀಲೀಲಾಗೆ ಚಿತ್ರರಂಗದಲ್ಲಿ ಉತ್ತಮ ಭವಿಷ್ಯವಿದೆ: ಹೊಗಳಿದ ಅಲ್ಲು ಅರ್ಜುನ್