‘ಪುಷ್ಪ 2′ (Pushpa 2) ಪ್ರೀಮಿಯರ್ ಶೋ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದ ಸಂಬಂಧ ಇಂದು (ಡಿ.24) ಹೈದರಾಬಾದ್‌ನ ಚಿಕ್ಕಡಪಲ್ಲಿ ಪೊಲೀಸರು ನಟ ಅಲ್ಲು ಅರ್ಜುನ್‌ಗೆ (Allu Arjun) ನೋಟಿಸ್ ನೀಡಿದ್ದು, ಇಂದು ವಿಚಾರಣೆಗೆ ಹಾಜರಾಗಿದ್ದಾರೆ.
‘ಪುಷ್ಪ 2’ ಪ್ರಿಮೀಯರ್ ಶೋ ವೇಳೆ ರೇವತಿ ಎಂಬ ಮಹಿಳೆ ಕಾಲ್ತುಳಿಕ್ಕೆ ಬಲಿಯಾಗಿದ್ದರು. ಈ ಹಿನ್ನೆಲೆ ನಟ ಅಲ್ಲು ಅರ್ಜುನ್‌ಗೆ ಪೊಲೀಸರು ನೋಟಿಸ್ ನೀಡಿದ್ದರು. ಅದರಂತೆ ಇಂದು ಅಲ್ಲು ಅರ್ಜುನ್ ವಿಚಾರಣೆಗೆ ಹಾಜರಾಗಿದ್ದಾರೆ. ಇದನ್ನೂ ಓದಿ:ಖ್ಯಾತ ಚಲನಚಿತ್ರ ನಿರ್ದೇಶಕ ಶ್ಯಾಮ್ ಬೆನಗಲ್ ಇನ್ನಿಲ್ಲ
ಇನ್ನೂ ಮೃತ ರೇವತಿ ಪುತ್ರ ಶ್ರೀತೇಜ ಕೂಡ ಗಂಭೀರ ಸ್ಥಿತಿಯಲ್ಲಿದ್ದಾರೆ. ಅವರಿಗೂ ಚಿಕಿತ್ಸೆ ನೀಡಲಾಗುತ್ತಿದೆ.
ಡಿ.13ರಂದು ಕಾಲ್ತುಳಿತ ಪ್ರಕರಣ ಸಂಬಂಧ ಅಲ್ಲು ಅರ್ಜುನ್‌ರನ್ನು ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದರು. ಬೇಲ್ ಸಿಕ್ಕ ಹಿನ್ನೆಲೆ ನಟ ರಿಲೀಸ್ ಆಗಿದ್ದರು.
ಇನ್ನೂ ಈಗಾಗಲೇ ಮೃತ ರೇವತಿ ಕುಟುಂಬಕ್ಕೆ ಅಲ್ಲು ಅರ್ಜುನ್ 25 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ತಮ್ಮ ಇಡೀ ತಂಡ ನೋಡಿಕೊಳ್ಳಲಿದೆ ಎಂದು ತಿಳಿಸಿದ್ದರು.