ರಶ್ಮಿಕಾ ಮಂದಣ್ಣ ಬರ್ತ್‌ಡೇಗೆ ಶ್ರೀವಲ್ಲಿ ಲುಕ್ ರಿವೀಲ್

Public TV
2 Min Read
rashmika mandanna

ನ್ನಡತಿ ರಶ್ಮಿಕಾ ಮಂದಣ್ಣಗೆ (Rashmika Mandanna) ಇಂದು (ಏ.5) ಹುಟ್ಟುಹಬ್ಬದ ಸಂಭ್ರಮವಾಗಿದ್ದು, ಈ ದಿನ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ‘ಪುಷ್ಪ’ (Pushpa) ಚಿತ್ರದ ಮುಂದುವರೆದ ಭಾಗದಲ್ಲಿ ಶ್ರೀವಲ್ಲಿ ಲುಕ್ ಹೇಗಿರಲಿದೆ ಎಂಬುದು ಈಗ ರಿವೀಲ್ ಆಗಿದೆ. ಚಿತ್ರದ ಪೋಸ್ಟರ್‌ ರಿವೀಲ್‌ ಮಾಡುವ ಮೂಲಕ ಫ್ಯಾನ್ಸ್‌ಗೆ ಭರ್ಜರಿ ಗಿಫ್ಟ್‌ ನೀಡಿದ್ದಾರೆ.

rashmika mandanna 8‘ಪುಷ್ಪ’ ಚಿತ್ರದಲ್ಲಿ ಹಳ್ಳಿ ಹುಡುಗಿ ಪಾತ್ರದಲ್ಲಿ ಶ್ರೀವಲ್ಲಿ ಮಿಂಚಿದ್ದರು. ಪುಷ್ಪ ಪಾರ್ಟ್ ಒನ್‌ಗಿಂತ ಭಾಗ 2ರಲ್ಲಿ (Pushpa 2) ನಟಿಯ ಲುಕ್ ವಿಭಿನ್ನವಾಗಿದೆ. ಕತ್ತಿನಲ್ಲಿ ಬಂಗಾರ ಹೇರಿಕೊಂಡು ಕಣ್ಣಿನ ಬಳಿ ಕೈ ಹಿಡಿದು ಸೂಪರ್ ಎಂದು ರಶ್ಮಿಕಾ ಪೋಸ್ ಕೊಟ್ಟಿದ್ದಾರೆ. ಈ ಮೂಲಕ ನಟಿಗೆ ಚಿತ್ರತಂಡ ಹುಟ್ಟುಹಬ್ಬಕ್ಕೆ ಶುಭಕೋರಿದೆ. ಮುಗ್ಧ ಹುಡುಗಿಯಂತಿದ್ದ ಶ್ರೀವಲ್ಲಿ ಇದೀಗ ರೆಬೆಲ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಪುಷ್ಪ ಪಾರ್ಟ್ 2ಗೆ `ಪುಷ್ಪ: ದಿ ರೈಸ್’ ಎನ್ನುವ ಶೀರ್ಷಿಕೆ ಇಡಲಾಗಿದೆ. ಮೊದಲ ಭಾಗದಲ್ಲಿ ಕೇವಲ ಕಾರ್ಮಿಕನಂತಿದ್ದ ಪುಷ್ಪರಾಜ್ ಈಗ ರಕ್ತಚಂದನದ ಕಳ್ಳಸಾಗಣೆಯಲ್ಲಿ ಆತನೇ ಕಿಂಗ್‌ಪಿನ್ ಆಗಿ ಬೆಳೆದಿರುತ್ತಾನೆ. ಮೊದಲ ಭಾಗದಲ್ಲಿ ವಿದೇಶದ ರೆಫರೆನ್ಸ್ ನೀಡಲಾಗಿತ್ತು. ರಕ್ತಚಂದನ ಜಪಾನ್‌ಗೆ ರಫ್ತಾಗಲಿದೆ ಎಂದು ತೋರಿಸಲಾಗಿತ್ತು. ಈಗ ಎರಡನೇ ಭಾಗದಲ್ಲಿ ಸಿನಿಮಾದ ಒಂದಷ್ಟು ಕಥೆ ವಿದೇಶದಲ್ಲೇ ನಡೆದಿದೆ ಎನ್ನಲಾಗಿದೆ. ಮೊದಲ ಭಾಗಕ್ಕಿಂತ 2ನೇ ಭಾಗ ದೊಡ್ಡದಾಗಿ ಇರಲಿದೆ ಎಂದು ಚಿತ್ರತಂಡ ತಿಳಿಸಿದೆ.

RASHMIKA MANDANNA 3

ಚಿತ್ರದಲ್ಲಿ ಅಲ್ಲು ಅರ್ಜುನ್ (Allu Arjun), ರಶ್ಮಿಕಾ ಮಂದಣ್ಣ, ಕನ್ನಡದ ಡಾಲಿ ಧನಂಜಯ್ ಸೇರಿದಂತೆ ಹಲವರು ನಟಿಸಿದ್ದಾರೆ. ಇದೇ ಆಗಸ್ಟ್ 15ರಂದು ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ. ಇದನ್ನೂ ಓದಿ:ಪ್ರಧಾನಿ ಮೋದಿ ವಿಷ್ಣುವಿನ ಅವತಾರ: ಕಂಗನಾ ಹೇಳಿಕೆ ವೈರಲ್

ಅಂದಹಾಗೆ, ರಶ್ಮಿಕಾ ಮಂದಣ್ಣ ಈ ಬಾರಿಯ ಹುಟ್ಟು ಹಬ್ಬವನ್ನು ವಿದೇಶದಲ್ಲಿ ಆಚರಿಸಿಕೊಳ್ಳುತ್ತಿದ್ದಾರೆ. ಹುಟ್ಟು ಹಬ್ಬದ ಒಂದು ದಿನ ಅಬುಧಾಬಿಯಲ್ಲಿ ಅವರು ಕಾಣಿಸಿಕೊಂಡಿದ್ದರು. ಆದರೆ, ಹುಟ್ಟು ಹಬ್ಬದ ಪಾರ್ಟಿ ಯುಎಸ್‌ಎಗೆ ಶಿಫ್ಟ್ ಆಗಿದೆ ಎಂದು ಹೇಳಲಾಗುತ್ತಿದೆ. ಅದಕ್ಕೆ ಕಾರಣ ವಿಜಯ್ ದೇವರಕೊಂಡ (Vijay Devarakonda) ಎನ್ನುವ ಮಾತೂ ಕೇಳಿ ಬಂದಿದೆ.

Share This Article