ಮುಂಬೈನ ಅಟಲ್ ಸೇತು ಬಗ್ಗೆ ಹಾಡಿ ಹೊಗಳಿದ್ದ ರಶ್ಮಿಕಾ ಮಂದಣ್ಣ (Rashmika Mandanna) ಹೇಳಿಕೆಗೆ ಪ್ರಧಾನಿ ನರೇಂದ್ರ (Narendra Modi) ಧನ್ಯವಾದ ತಿಳಿಸಿದ್ದರು. ಇದೀಗ ಅವರ ಹೇಳಿಕೆಗೆ ನಟಿ ಪ್ರತಿಕ್ರಿಯೆ ನೀಡಿದ್ದಾರೆ. ನರೇಂದ್ರ ಮೋದಿ ರಿಯಾಕ್ಟ್ ಮಾಡಿರುವುದಕ್ಕೆ ನಟಿ ಖುಷಿಪಟ್ಟಿದ್ದಾರೆ. ಇದನ್ನೂ ಓದಿ:ಮತ್ತೆ ಶಾರುಖ್ ಖಾನ್ ಜೊತೆ ಕೈಜೋಡಿಸಿದ ಮ್ಯೂಸಿಕ್ ಡೈರೆಕ್ಟರ್ ಅನಿರುದ್ಧ ರವಿಚಂದರ್
Advertisement
ಅಟಲ್ ಸೇತು ಬಗ್ಗೆ ನಟಿ ಹೆಮ್ಮೆಯ ಮಾತುಗಳನ್ನಾಡಿರುವ ವೀಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದ ಮೋದಿ, ಜನರನ್ನು ಸಂಪರ್ಕಿಸುವುದು ಮತ್ತು ಜೀವನವನ್ನು ಸುಧಾರಿಸುವುದಕ್ಕಿಂತ ಹೆಚ್ಚು ತೃಪ್ತಿಕರವಾದದ್ದೇನೂ ಇಲ್ಲ ಎಂದು ಪ್ರತಿಕ್ರಿಯೆ ನೀಡಿದ್ದರು. ಇದಕ್ಕೆ ಈಗ ನಟಿ ರಿಯಾಕ್ಟ್ ಮಾಡಿದ್ದು, ‘ಸರ್, ಒಬ್ಬ ಹೆಮ್ಮೆಯ ಯುವ ಭಾರತೀಯಳಾಗಿ ನಮ್ಮ ದೇಶದ ಬೆಳವಣಿಗೆಗೆ ಸಾಕ್ಷಿಯಾಗಲು ಹೆಮ್ಮೆಯಾಗುತ್ತದೆ’ ಎಂದು ಹೇಳಿದ್ದಾರೆ.
Advertisement
Sir! What an honor! It’s incredibly fulfilling to witness our country’s growth as a super proud young Indian. 🙏🏻🤍 https://t.co/ZY19v2czFf
— Rashmika Mandanna (@iamRashmika) May 17, 2024
Advertisement
ರಶ್ಮಿಕಾ ಮಂದಣ್ಣ ಹೇಳಿದ್ದೇನು?
ಈಚೆಗೆ ಪ್ರಧಾನಿ ಮೋದಿ ಅವರಿಂದ ಉದ್ಘಾಟನೆಗೊಂಡ ಅಟಲ್ ಸೇತು (ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್) ಮತ್ತು ದೇಶದ ಮೂಲಸೌಕರ್ಯ ಅಭಿವೃದ್ಧಿ ಬಗ್ಗೆ ರಶ್ಮಿಕಾ ಮಂದಣ್ಣ ಹೆಮ್ಮೆಯಿಂದ ಮಾತನಾಡಿದ್ದರು.
Advertisement
South India to North India… West India to East India… Connecting people, connecting hearts! 🤍 #MyIndia pic.twitter.com/nma43rN3hM
— Rashmika Mandanna (@iamRashmika) May 16, 2024
ನವಿ ಮುಂಬೈನಿಂದ ಮುಂಬೈಗೆ ಪ್ರಯಾಣಿಸಲು ಎರಡು ಗಂಟೆ ಹಿಡಿಯುತ್ತಿತ್ತು. ಈಗ ಅದು 20 ನಿಮಿಷಗಳಿಗೆ ಇಳಿದಿದೆ. ಯೋಚಿಸಿದರೆ ಅಸಾಧ್ಯ ಎನಿಸುತ್ತದೆ. ಅದನ್ನು ಸಾಧಿಸಿ ತೋರಿಸಿದ್ದಾರೆ. ಗೋವಾದಿಂದ ಮುಂಬೈಗೆ, ಬೆಂಗಳೂರಿನಿಂದ ಮುಂಬೈ ರಸ್ತೆ ಹಾಗೂ ಇನ್ನಿತರೆ ಮೂಲಸೌಕರ್ಯಗಳು ಅಭಿವೃದ್ಧಿಯಾಗುತ್ತಿರುವ ರೀತಿ ನೋಡಿದರೆ ಹೆಮ್ಮೆ ಎನಿಸುತ್ತದೆ ಎಂದು ನಟಿ ಮಾತನಾಡಿದ್ದರು.
ಭಾರತ ಈಗ ವೇಗವಾಗಿ ಸಾಗುತ್ತಿದೆ. ಎಲ್ಲೂ ನಿಲ್ಲುತ್ತಿಲ್ಲ. ಕಳೆದ 10 ವರ್ಷಗಳಲ್ಲಿ ಭಾರತ ಅದ್ಭುತವಾದ ಅಭಿವೃದ್ಧಿಯನ್ನು ಸಾಧಿಸಿದೆ. ಪ್ರಗತಿ ಎಂಬುದು ಬಹಳ ವೇಗವಾಗಿ ಆಗುತ್ತಿದೆ. ಈ ಅಟಲ್ ಸೇತು ಕೇವಲ ಏಳು ವರ್ಷಗಳಲ್ಲಿ ಮುಗಿದಿದೆಯಂತೆ. ಹೊಸ ಭಾರತ ಉದಯವಾಗುತ್ತಿದೆ. ಭಾರತ ವಿಶ್ವದ ಬುದ್ಧಿವಂತ ದೇಶ ಎಂದು ಹೇಳಲು ಬಯಸುತ್ತೇನೆ. ಭಾರತದ ಯುವಕರು ಜವಾಬ್ದಾರಿಯುತವಾಗಿ ಮತ ಹಾಕಬೇಕು. ನಮ್ಮ ದೇಶ ಸಾಧಿಸುತ್ತಿರುವ ಪ್ರಗತಿ ನಿಲ್ಲಬಾರದು. ಹಾಗಾಗಿ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಮತ ಹಾಕಬೇಕು ಎಂದು ನಟಿ ಮಾತನಾಡಿದ್ದರು. ಈ ಮೂಲಕ ನರೇಂದ್ರ ಮೋದಿ ಅವರ ಸಾಧನೆಯನ್ನು ನಟಿ ಕೊಂಡಾಡಿದ್ದರು.