ಮಾಸ್ಕೋ: ರಷ್ಯಾದ (Russia) ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ತನ್ನ ಸೇನೆಯನ್ನು (Military) ಭಾಗಶಃ ಸಜ್ಜುಗೊಳಿಸುವಂತೆ ಆದೇಶ ನೀಡಿದ್ದಾರೆ. ಈ ಆದೇಶದಿಂದಾಗಿ ರಷ್ಯಾ ಉಕ್ರೇನ್ (Ukraine) ಮೇಲಿನ ಯುದ್ಧದಲ್ಲಿ ಪರಮಾಣು ಶಸ್ತ್ರಾಸ್ತ್ರವನ್ನು (Nuclear Weapons) ಬಳಸುವ ಸುಳಿವು ನೀಡಿದ್ದಾರೆ.
ನಮ್ಮ ದೇಶದ ಪ್ರಾದೇಶಿಕ ಸಮಗ್ರತೆಗೆ ಬೆದರಿಕೆಯಿದ್ದರೆ, ರಷ್ಯಾ ಹಾಗೂ ನಮ್ಮ ಜನರನ್ನು ರಕ್ಷಿಸಲು ನಾವು ನಮ್ಮಿಂದಾಗುವ ಎಲ್ಲಾ ರೀತಿಯ ವಿಧಾನಗಳನ್ನೂ ಬಳಸುತ್ತೇವೆ ಎಂದು ಪುಟಿನ್ ರಾಷ್ಟ್ರವನ್ನು ಉದ್ದೇಶಿಸಿ ದೂರದರ್ಶನದ ಭಾಷಣದಲ್ಲಿ ಹೇಳಿದ್ದಾರೆ. ಈ ಮೂಲಕ ರಷ್ಯಾ ತನ್ನ ಎಲ್ಲಾ ಅಪಾಯಕಾರಿ ಶಸ್ತ್ರಾಸ್ತ್ರಗಳನ್ನು ಬಳಕೆ ಮಾಡುವ ಬಗ್ಗೆ ಪುಟಿನ್ ಎಚ್ಚರಿಸಿದ್ದಾರೆ. ಇದನ್ನೂ ಓದಿ: ಹಿಂದೂ, ಮುಸ್ಲಿಮರು ಸಹೋದರ, ಸಹೋದರಿಯರಂತೆ ಇದ್ದೇವೆ- ಬ್ರಿಟನ್‌ನಲ್ಲಿ ಒಗ್ಗಟ್ಟಿನ ಮಂತ್ರ
ಅಮೆರಿಕ, ಯುರೋಪಿಯನ್ ಯೂನಿಯನ್, ಹಾಗೂ ಬ್ರಿಟನ್ ಉಕ್ರೇನ್ ಅನ್ನು ಪ್ರೋತ್ಸಾಹಿಸುತ್ತಿದ್ದು, ರಷ್ಯಾದ ಮೇಲೆ ಮಿಲಿಟರಿ ಕಾರ್ಯಾಚರಣೆ ನಡೆಸುವ ಸಂಚು ರೂಪಿಸಿವೆ. ಪಶ್ಚಿಮವು ಪರಮಾಣು ಬ್ಲ್ಯಾಕ್‌ಮೇಲ್‌ನಲ್ಲಿ ತೊಡಗಿದೆ. ಆದರೆ ಇದಕ್ಕೆ ಪ್ರತ್ಯುತ್ತರ ನೀಡಲು ರಷ್ಯಾದಲ್ಲಿಯೂ ಸಾಕಷ್ಟು ಶಸ್ತ್ರಾಸ್ತ್ರಗಳಿವೆ ಎಂದು ಪುಟಿನ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ರತನ್ ಟಾಟಾ ಈಗ PM CARES Fund ಟ್ರಸ್ಟಿ- ಸುಧಾಮೂರ್ತಿಗೆ ಸಲಹಾ ಮಂಡಳಿಯಲ್ಲಿ ಸ್ಥಾನ
ಪೂರ್ವ ಉಕ್ರೇನ್‌ನ ಡಾನ್‌ಬಾಸ್ ಪ್ರದೇಶವನ್ನು ಸ್ವತಂತ್ರ್ಯಗೊಳಿಸುವ ಗುರಿಯಿದೆ. ರಷ್ಯಾದ ನಿಯಂತ್ರಣದಲ್ಲಿರುವ ಆ ಪ್ರದೇಶದಲ್ಲಿ ಹೆಚ್ಚಿನ ಜನರು ಕೀವ್‌ನಿಂದ ಆಡಳಿತ ನಡೆಯುವುದನ್ನು ನಿರಾಕರಿಸುತ್ತಿದ್ದಾರೆ ಎಂದು ತಿಳಿಸಿದರು.