ವಾಷಿಂಗ್ಟನ್: ರಷ್ಯಾ-ಉಕ್ರೇನ್ ಯುದ್ಧ (Russia Ukraine War) ಕೊನೆಗೊಳಿಸಲು ಶತಪ್ರಯತ್ನ ನಡೆಸುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಈಗ ಇದ್ದಕ್ಕಿದ್ದಂತೆ ಯೂಟರ್ನ್ ಹೊಡೆದಿದ್ದಾರೆ. ಯುದ್ಧ ಕೊನೆಗೊಳಿಸುವ ಪ್ರಯತ್ನದಲ್ಲಿ ನೇರ ಹಸ್ತಕ್ಷೇಪದಿಂದ ಹಿಂದೆ ಸರಿಯಲು ಟ್ರಂಪ್ ನಿರ್ಧರಿಸಿದ್ದಾರೆ. ಅಮೆರಿಕದ ಮಧ್ಯಸ್ಥಿಕೆ ಇಲ್ಲದೇ ಪುಟಿನ್ – ಝಲೆನ್ಸ್ಕಿ ಮೊದಲು ಮುಖಾಮುಖಿ ಭೇಟಿಯಾಗಬೇಕು, ನೇರ ಮಾತುಕತೆ ನಡೆಸಬೇಕು ಎಂದು ಹೇಳಿದ್ದಾರೆ.
ಶ್ವೇತಭವನದ (White House) ಆಡಳಿತಾಧಿಕಾರಿಗಳು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಕುರಿತು ಮಾತನಾಡಿದ್ದಾರೆ. ಮುಂದಿನ ಹಂತದ ಶಾಂತಿ ಮಾತುಕತೆಗಳಲ್ಲಿ ಟ್ರಂಪ್ ನೇರವಾಗಿ ಭಾಗಿಯಾಗದಿರಲು ನಿರ್ಧರಿಸಿದ್ದಾರೆ. ಬದಲಾಗಿ ರಷ್ಯಾ ಅಧ್ಯಕ್ಷ ಪುಟಿನ್, ಉಕ್ರೇನ್ ಅಧ್ಯಕ್ಷ ಝಲೆನ್ಸ್ಕಿ (Volodymyr Zelenskyy) ಮೊದಲು ಪರಸ್ಪರ ಭೇಟಿಯಾಗಬೇಕೆಂದು ಅವರು ಬಯಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಷ್ಯಾ ಮೇಲೆ ಒತ್ತಡ ಹೇರಲು ಭಾರತದ ಮೇಲೆ ಸುಂಕ – ವೈಟ್ ಹೌಸ್
ಟ್ರಂಪ್ ದೃಷ್ಟಿಕೋನದಲ್ಲಿ ಯುದ್ಧ ಕೊನೆಗೊಳಿಸುವ ಮುಂದಿನ ಹೆಜ್ಜೆ ಪುಟಿನ್, ಝಲೆನ್ಸ್ಕಿ ನಡುವಿನ ದ್ವಿಪಕ್ಷೀಯ ಸಭೆ. ಈ ಸಭೆ ನಿಜವಾಗ್ಲೂ ನಡೆಯುತ್ತದೆಯೋ, ಇಲ್ಲವೋ? ಅನ್ನೋದು ಖಚಿತವಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದನ್ನೂ ಓದಿ: ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸಲು ಮುಂದಾದ ಟ್ರಂಪ್‌ಗೆ ಯುರೋಪಿಯನ್ ಒಕ್ಕೂಟ ಬೆಂಬಲ – ನಾಳೆಯ ಸಭೆ ಮೇಲೆ ನಿಗಾ
ಟ್ರಂಪ್ ಉತ್ತರವೇನು?
ರೇಡಿಯೋವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಖುದ್ದು ಮಾತನಾಡಿದ ಟ್ರಂಪ್, ಇಬ್ಬರೂ ಮಾತುಕತೆಗೆ ತಯಾರಿ ನಡೆಸುತ್ತಿದ್ದಾರೆ. ದ್ವಿಪಕ್ಷೀಯ ಸಭೆಯಲ್ಲಿ ಏನಾಗುತ್ತದೆ ಎಂಬುದನ್ನು ನಾನು ಕಾದು ನೋಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಚೀನಾವನ್ನ ಎದುರಿಸಬೇಕಾದ್ರೆ ಭಾರತ-ಅಮೆರಿಕ ಸಂಬಂಧವನ್ನ ಹಳಿಗೆ ತನ್ನಿ – ಟ್ರಂಪ್‌ಗೆ ನಿಕ್ಕಿ ಹ್ಯಾಲಿ ಮತ್ತೆ ಎಚ್ಚರಿಕೆ
ಶ್ವೇತಭವನದಲ್ಲಿ ಏನಾಗಿತ್ತು?
ಇತ್ತೀಚೆಗಷ್ಟೇ ಶ್ವೇತಭವನದಲ್ಲಿ ಉಕ್ರೇನ್ ಮತ್ತು ಯುರೋಪಿಯನ್ ಒಕ್ಕೂಟದ ನಾಯಕರ ಜೊತೆ ಟ್ರಂಪ್ ಸಭೆ ನಡೆಸಿದ್ದರು. ಸಭೆ ಮುಗಿದ ಬಳಿಕ ಟ್ರಂಪ್ ಈ ಎಲ್ಲಾ ನಾಯಕರನ್ನು ತನ್ನ ಓವಲ್ ಕಚೇರಿಯ ಕ್ಯಾಬಿನ್‌ಗೆ ಕರೆಸಿ ರಷ್ಯಾದ ಅಧ್ಯಕ್ಷ ಪುಟಿನ್‌ಗೆ ನೇರವಾಗಿ ಕರೆ ಮಾಡಿದ್ದರು. ರಷ್ಯಾ ಮತ್ತು ಉಕ್ರೇನಿಯನ್ ನಿಯೋಗಗಳ ನಡುವೆ ನೇರ ಮಾತುಕತೆಗಳನ್ನು ಮುಂದುವರಿಸಲು ಪುಟಿನ್‌ಗೆ ಕರೆ ನೀಡಿದ್ದರು. ಇಬ್ಬರು ನಾಯಕರ ಮಧ್ಯೆ ಒಟ್ಟು 40 ನಿಮಿಷಗಳ ಮಾತುಕತೆ ನಡೆದಿತ್ತು. ಈ ವೇಳೆ ಇತ್ತೀಚಿನ ಅಲಾಸ್ಕಾ ಭೇಟಿಯ ಸಮಯದಲ್ಲಿ ಟ್ರಂಪ್ ನೀಡಿದ ಆತಿಥ್ಯ ಮತ್ತು ಅಲಾಸ್ಕಾದಲ್ಲಿ ನಡೆದ ಶೃಂಗಸಭೆಯಲ್ಲಿ ಸಾಧಿಸಿದ ಪ್ರಗತಿಗೆ ಪುಟಿನ್ ಟ್ರಂಪ್‌ಗೆ ಧನ್ಯವಾದ ಹೇಳಿದರು. ಇದನ್ನೂ ಓದಿ: ಝೆಲೆನ್‌ಸ್ಕಿ, EU ನಾಯಕರನ್ನು ಕಚೇರಿಗೆ ಕರೆಸಿ ಪುಟಿನ್‌ಗೆ ಕಾಲ್ – ಬ್ರೋಕರ್ ಕೆಲ್ಸ ಮಾಡಿ ಯುದ್ಧ ಕೊನೆಯಾಗಲಿದೆ ಎಂದ ಟ್ರಂಪ್