ಲಂಡನ್: ಉಕ್ರೇನ್ ವಿರುದ್ಧದ ರಷ್ಯಾ ಅಜಾಗರೂಕ ಕಾರ್ಯಾಚರಣೆಯು ಇಡೀ ಯೂರೋಪ್ ಭದ್ರತೆಗೆ ಕೊಟ್ಟ ಹೊಡೆತವಾಗಿದೆ ಎಂದು ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಕಳವಳ ವ್ಯಕ್ತಪಡಿಸಿದ್ದಾರೆ.
Advertisement
ರಷ್ಯಾದ ಪಡೆಗಳು ಉಕ್ರೇನಿಯನ್ ಪರಮಾಣು ವಿದ್ಯುತ್ ಸ್ಥಾವರವನ್ನು ಆಕ್ರಮಿಸಿದೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಯುರೋಪಿನಾದ್ಯಂತ ಅಪಾಯವನ್ನುಂಟುಮಾಡುತ್ತಿದ್ದಾರೆ ಎಂದು ಬೋರಿಸ್ ಜಾನ್ಸನ್ ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಬಾಹ್ಯಾಕಾಶ ರಾಕೆಟ್‌ನಿಂದ ಅಮೆರಿಕ, ಜಪಾನ್ ಧ್ವಜ ತೆಗೆದು ಭಾರತ ಧ್ವಜ ಉಳಿಸಿಕೊಂಡ ರಷ್ಯಾ- Video Viral
Advertisement
ರಷ್ಯಾ ಅಧ್ಯಕ್ಷ ಪುಟಿನ್ ಅವರ ಅಜಾಗರೂಕ ಕ್ರಮಗಳು ಈಗ ನೇರವಾಗಿ ಯುರೋಪ್‌ನ ಸುರಕ್ಷತೆಗೆ ಬೆದರಿಕೆ ಹಾಕಬಹುದು. ವಿಶ್ವಸಂಸ್ಥೆಯ ಭದ್ರತಾ ಮಂಡಳಿ ತುರ್ತು ಸಭೆ ಅಗತ್ಯವಿದೆ ಎಂದು ಜಾನ್ಸನ್ ಆಶಯ ವ್ಯಕ್ತಪಡಿಸಿದ್ದಾರೆ.
Advertisement
Advertisement
ನ್ಯಾಟೋ ಒಕ್ಕೂಟಕ್ಕೆ ಸೇರುವ ಉಕ್ರೇನ್ ನಿರ್ಧಾರವನ್ನು ವಿರೋಧಿಸಿ ಉಕ್ರೇನ್ ಮೇಲೆ ರಷ್ಯಾ ಯುದ್ಧವನ್ನು ನಡೆಸುತ್ತಿದೆ. ಆದರೆ ಯೂರೋಪ್ ರಾಷ್ಟ್ರಗಳು ರಷ್ಯಾ ಕ್ರಮವನ್ನು ಖಂಡಿಸಿವೆ. ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆ, ಸಾಮಾನ್ಯ ಸಭೆಯಲ್ಲಿ ಬ್ರಿಟನ್ ಸೇರಿದಂತೆ 141 ರಾಷ್ಟ್ರಗಳು ರಷ್ಯಾ ವಿರುದ್ಧ ಮತ ಚಲಾಯಿಸಿವೆ. ಇದನ್ನೂ ಓದಿ: ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟು- ಆಸ್ಪತ್ರೆಗೆ ದಾಖಲು